ಬೇಲೂರು ತಾಲ್ಲೂಕಿನ ಬಿಕ್ಕೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ಕೆಲವು ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳ ಮುಖಾಂತರ ಸ್ಥಳೀಯ ಯುವಕರು ಪ್ರಜ್ವಲ್ ರೇವಣ್ಣ ಅವರ ಗಮನಕ್ಕೆ ತಂದಿದ್ದರು.
ಇದನ್ನು ಮನಗೊಂಡು ಸಂಸದರು ಖುದ್ದಾಗಿ ಅಧಿಕಾರಿಗಳು ಮತ್ತು ಶಾಸಕರ ಜೊತೆ ಭೇಟಿ ನೀಡಿ ಆಸ್ಪತ್ರೆಯ ಕುಂದು ಕೊರತೆಗಳನ್ನು ಆಲಿಸಿ. ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿ, ಇನ್ನು ಕೆಲವು ಸಮಸ್ಯೆಗಳನ್ನು ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಇಲಾಖೆಯ ಜೊತೆ ಸಮಾಲೋಚಿಸಿ ಶೀಘ್ರ ಬಗೆಹರಿಸುವುದಾಗಿ ತಿಳಿಸಿದ್ದರು
ಈ ಸಂದರ್ಭದಲ್ಲಿ ಬೇಲೂರು ಶಾಸಕರಾದ ಕೆ.ಎಸ್. ಲಿಂಗೇಶ್ ರವರು, ಉಪವಿಭಾಗಾಧಿಕಾರಿ ಗಿರೀಶ್ ನಂದನ್ ರವರು, ತಹಶೀಲ್ದಾರ್ ಎನ್ ವಿ ನಟೇಶ್ ರವರು, ತಾಪಂ ಇಓ ರವಿಕುಮಾರ್ ರವರು ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.