ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹಗೊಳಿಸಲಾಗಿದೆ ಎಂದು ಹೈಕೋರ್ಟ್ ಇದೀಗ ಆದೇಶ ಹೊರಡಿಸಿದೆ. , ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಆಸ್ತಿ ವಿವರವನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ ಎಂದು ವಕೀಲ ಹಾಗೂ ಕೆಡಿಪಿ ಮಾಜಿ ಸದಸ್ಯ , ಕಳೆದ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಪರಾಜಿತ ಆಭ್ಯರ್ಥಿ ದೇವರಾಜೇಗೌಡ ಆರೋಪಿಸಿ ಏ.26, 2019ರಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಕೂಲಂಕುಷವಾಗಿ ಪರಿಶೀಲಿಸಿ ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗವು ಹಾಸನ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು , ಈ ಬೆನ್ನಲ್ಲೆ ಆಸ್ತಿ ವಿವರವನ್ನು ಪರಿಶೀಲನೆ ನಡೆಸಿದಾಗ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹಗೊಳಿಸಲಾಗಿದೆ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. , ಪ್ರಜ್ವಲ್ ರೇವಣ್ಣ ಆಸ್ತಿ ವಿವರೆಷ್ಟು ಗೊತ್ತಾ? , ಈ ವೇಳೆ ಪ್ರಜ್ವಲ್ ಒಟ್ಟು ಆಸ್ತಿ .8,13,622 ಆಗಿದ್ದು, ಇದರಲ್ಲಿ .4,89,15,029 ಮೌಲ್ಯದ ಸ್ಥಿರಾಸ್ತಿ, .1,68,86,632 ಮೌಲ್ಯದ ಚರಾಸ್ತಿಗಳೂ ಸೇರಿವೆ. ಇಷ್ಟೇ ಅಲ್ಲದೆ, ಪ್ರಜ್ವಲ್ ಅವರು .3.72 ಕೋಟಿ ಖಾಸಗಿ ಸಾಲವನ್ನೂ ಮಾಡಿಕೊಂಡಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ತಂದೆ ರೇವಣ್ಣ, ತಾಯಿ ಭವಾನಿ, ಅನಸೂಯ, ಸಿ.ಎನ್. ಪಾಂಡು, ಸಿ.ಎನ್. ಪುಟ್ಟಸ್ವಾಮಿಗೌಡ, ಜಯರಾಂ, ಡಿ.ಕೆ.ನಾಗರಾಜ್, ಕಾಳೇಗೌಡ, ಬೋರೇಗೌಡ, ಶೈಲ ಅವರಿಂದ ಈ ಸಾಲ ಪಡೆದಿದ್ದಾರೆ. , ಪ್ರಜ್ವಲ್ ಹೆಸರಲ್ಲಿ ಒಟ್ಟು 36 ಎಕರೆ ಕೃಷಿ ಭೂಮಿಯೂ ಇದೆ. ಜತೆಗೆ, ಪ್ರಜ್ವಲ್ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗಳಲ್ಲಿ ಒಟ್ಟು .15.58 ಲಕ್ಷ ನಗದೂ ಇದೆ. ಒಟ್ಟು .37.31 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನೂ ಅವರು ಹೊಂದಿದ್ದಾರೆ. 18 ಹಸುಗಳು, 2 ಎತ್ತುಗಳನ್ನೂ ಪ್ರಜ್ವಲ್ ಸಾಕಿಕೊಂಡಿದ್ದಾರೆ. ಎನ್ನಲಾಗಿದೆ .
ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾ.ಕೆ.ನಟರಾಜನ್ ಅವರು ಆದೇಶ ಪ್ರಕಟಿಸಿದ್ದಾರೆ , 2019ರ ಲೋಕಾಸಭಾ ಚುನಾವಣಾ ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ನೀಡಿದ್ದಾರೆ. ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಪ್ರತಿಸ್ಪರ್ಧಿ ಎ.ಮಂಜು ಹಾಗು ವಕೀಲ ದೇವರಾಜೇಗೌಡ ಹೈ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು
ಕೋರ್ಟ್ ತೀರ್ಪು ಸ್ವಾಗತಾರ್ಹ : ಎ.ಮಂಜು
4 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದ್ದು, ನ್ಯಾಯಾಲಯದ ಮೇಲೆ ಸಂಪೂರ್ಣ ವಿಶ್ವಾಸವಿತ್ತು, ನ್ಯಾಯಾಲಯದ ತೀರ್ಪು ಸ್ವಾಗತಾರ್ಹ ಎಂದು ಮಾಜಿ ಸಚಿವ ಮತ್ತು ಹಾಲಿ ಶಾಸಕ ಎ.ಮಂಜು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದಿನ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಲೋಪದೋಷಗಳ ಬಗ್ಗೆ ಪ್ರಶ್ನಿಸಿ ದೂರು ನೀಡಲಾಗಿತ್ತು. ವಿಚಾರಣೆ ನಡೆಸಿ ಈ ಆದೇಶ ನೀಡಿದೆ. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಅವಕಾಶವಿದೆ. ಅಂದಿನ ರಾಜಕೀಯ ಪರಿಸ್ಥಿತಿಯೇ ಬೇರೆ ಇಂದಿನ ರಾಜಕೀಯ ಪರಿಸ್ಥಿತಿಯೇ ಬೇರೆ ಇದೆ. ದೇವೇಗೌಡರು ಮತ್ತು ಕುಮಾರಸ್ವಾಮಿ ನನಗೆ ರಾಜಕೀಯವಾಗಿ ಸಹಾಯ ಮಾಡಿದ್ದು, ಅವರು ನಮ್ಮ ಪಕ್ಷದ ನಾಯಕರು, ಆ ಸನ್ನಿವೇಶವೇ ಬೇರೆ, ಈ ಸನ್ನಿವೇಶವೇ ಬೇರೆ ಎಂದರು. ,
ಕೋರ್ಟ್ ತೀರ್ಪು ಸ್ವಾಗತಾರ್ಹ : ಎ.ಮಂಜು
4 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದ್ದು, ನ್ಯಾಯಾಲಯದ ಮೇಲೆ ಸಂಪೂರ್ಣ ವಿಶ್ವಾಸವಿತ್ತು, ನ್ಯಾಯಾಲಯದ ತೀರ್ಪು ಸ್ವಾಗತಾರ್ಹ ಎಂದು ಮಾಜಿ ಸಚಿವ ಮತ್ತು ಹಾಲಿ ಶಾಸಕ ಎ.ಮಂಜು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದಿನ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಲೋಪದೋಷಗಳ ಬಗ್ಗೆ ಪ್ರಶ್ನಿಸಿ ದೂರು ನೀಡಲಾಗಿತ್ತು. ವಿಚಾರಣೆ ನಡೆಸಿ ಈ ಆದೇಶ ನೀಡಿದೆ. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಅವಕಾಶವಿದೆ. ಅಂದಿನ ರಾಜಕೀಯ ಪರಿಸ್ಥಿತಿಯೇ ಬೇರೆ ಇಂದಿನ ರಾಜಕೀಯ ಪರಿಸ್ಥಿತಿಯೇ ಬೇರೆ ಇದೆ. ದೇವೇಗೌಡರು ಮತ್ತು ಕುಮಾರಸ್ವಾಮಿ ನನಗೆ ರಾಜಕೀಯವಾಗಿ ಸಹಾಯ ಮಾಡಿದ್ದು, ಅವರು ನಮ್ಮ ಪಕ್ಷದ ನಾಯಕರು, ಆ ಸನ್ನಿವೇಶವೇ ಬೇರೆ, ಈ ಸನ್ನಿವೇಶವೇ ಬೇರೆ ಎಂದರು.
, ರೇವಣ್ಣ- ಎ.ಮಂಜು ದೋಸ್ತಿಯ ಊಹಾಪೋಹಗಳಿಗೆ ಕೋರ್ಟ್ ತೆರೆ
ದೇವೇಗೌಡರ ಕಟುಂಬ ಹಾಗೂ ಎ.ಮಂಜು ಅವರು ಕಡುರಾಜಕೀಯ ವೈರಿಗಳಾಗಿದ್ದರು. ಒಮ್ಮೆ ದೇವೇಗೌಡರೊಂದಿಗೆ ಸ್ಪರ್ಧಿಸಿ ಎ.ಮಂಜು ಪರಾಭವಗೊಂಡಿದ್ದರು. ಎರಡನೇ ಬಾರಿಗೆ ಪ್ರಜ್ವಲ್ ರೇವಣ್ಣ ಅವರೊಂದಿಗೆ ಬಿಜೆಪಿಯಿಂದ ಎ.ಮಂಜು ಸ್ಪರ್ಧಿಸಿ ಸೋಲು ಕಂಡಿದ್ದರು. ಈ ಸಂದರ್ಭದಲ್ಲಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಹೊರಾಟ ನಡೆಸುತ್ತಿದ್ದರು. ಬದಲಾದ ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಮಿತ್ರರೂ ಅಲ್ಲ ಎನ್ನುವಂತೆ ಮತ್ತೆ ದೇವೇಗೌಡರ ಪಕ್ಷದಲ್ಲಿ ಟಿಕೆಟ್ ಪಡೆದು ಅರಕಲಗೂಡು ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಹಲವು ಊಹಾಪೋಹಗಳಿದ್ದವು. ಹೈಕೋರ್ಟ್‌ನಲ್ಲಿರುವ ಪ್ರಕರಣವನ್ನು ಎ.ಮಂಜು ಹಿಂಪಡೆಯುತ್ತಾರೆ, ಹೊಂದಾಣಿಕೆ ಮಾಡಿಕೊಂಡಿದ್ದಾರೆ, ಪ್ರಜ್ವಲ್ ರೇವಣ್ಣ ಅವರಿಗೆ ಯಾವ ತೊಂದರೆಯೂ ಇಲ್ಲ ಎಂದು ಹೇಳಲಾಗುತ್ತಿತ್ತು. ಆದರೆ ಘನ ನ್ಯಾಯಾಲಯ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆಯುವ ಮೂಲಕ ಕಾನೂನಿನ ಚೌಕಟ್ಟಿನಲ್ಲಿ ಎಲ್ಲಾ ವಾದ ವಿವಾದ ಪರಿಶೀಲಿಸಿ ಈ ಅನರ್ಹ ಆದೇಶ ನೀಡುವ ಮೂಲಕ ಇಡೀ ರಾಜಕೀಯ ಲೆಕ್ಕಾಚಾರವನ್ನೇ ಬುಡಮೇಲು ಮಾಡಿದೆ.
, ಸುಪ್ರೀಂಕೋರ್ಟ್‌ಗೆ ಮೇಲ್ಮನವಿ
ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನ ಅನರ್ಹಗೊಳಿಸಿ ಹೈಕೋರ್ಟ್ ಅದೇಶ ನೀಡಿರುವ ಹಿನ್ನೆಲೆಯಲ್ಲಿ ದೇವೇಗೌಡರ ಕುಟುಂಬ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಕಾನೂನು ತಜ್ಞರು, ವಕೀಲರ ಜೊತೆ ಚರ್ಚಿಸುತ್ತಿರುವ ರೇವಣ್ಣ ಅವರ ಕುಟುಂಬ ಮೇಲ್ಮನವಿ ಸಲ್ಲಿಸಲಿದ್ದಾರೆ. ಈ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಪರಿಗಣಿಸಿ ತಡೆಯಾಜ್ಞೆ ನೀಡಿದ್ದೇ ಆದಲ್ಲಿ ಪ್ರಜ್ವಲ್ ಸ್ವಲ್ಪ ನಿಟ್ಟುಸಿರುಬಿಡುವಂತಾಗುತ್ತದೆ. ಒಂದು ವೇಳೆ ಸುಪ್ರೀಂಕೋಟ್ ಇವರ ಅರ್ಜಿ ವಜಾಗೊಳಿಸಿದರೆ ಭಾರೀ ಸಂಕಷ್ಟ ಎದುರಾಗಲಿದೆ. ಏಕೆಂದರೆ ಪ್ರಜಾಪ್ರತಿನಿಧಿ ಕಾಯ್ದೆ ಪ್ರಕಾರ ಇವರ ಸದಸ್ಯತ್ವ ಅನರ್ಹವಾಗುವುದರ ಜೊತೆಗೆ ಮುಂಬರುವ ಚುನಾವಣೆಗಳಲ್ಲಿ ಇಂತಿಷ್ಟು ವರ್ಷಗಳು ಸ್ಪರ್ಧಿಸಲು ಅವಕಾಶ ಇರುವುದಿಲ್ಲ.