ಹಾಸನ ವಿಧಾನಸಭಾ ಕ್ಷೇತ್ರದ ಶಾಸಕರ ಈ ವಾರದಲ್ಲಿ ನಡೆದ ಕಾರ್ಯಕ್ರಮಗಳ ವಿವರ

0

ಹಾಸನ : ಸರ್ಕಾರಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ  ವಿದ್ಯಾರ್ಥಿಗಳಿಗೆ ಕೋವಿಡ್-19 ಮಹಾಮಾರಿಯ ಸಂಕಷ್ಟದ ದಿನಗಳಲ್ಲಿ ವಿದ್ಯಾಭ್ಯಾಸಕ್ಕೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರವು ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್ ನಾರಾಯಣ ಅವರ ಮೇಲುಸ್ತುವಾರಿಯಲ್ಲಿ ಎಲ್ಲಾ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್, ಪಿ.ಸಿ ಗಳನ್ನು ಉಚಿತವಾಗಿ ನೀಡುವ ಕಾರ್ಯಕ್ರಮವನ್ನು ಸರಳವಾಗಿ ಮತ್ತು

ಸಾಂಕೇತಿಕವಾಗಿ ಹಾಸನ ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ 6 ಕಾಲೇಜುಗಳ ತಲಾ 10 ವಿದ್ಯಾರ್ಥಿಗಳಿಗೆ ಹಾಸನ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ ಗೌಡ ವಿತರಿಸಿದರು

ಹಾಸನ ತಾಲೂಕಿನ ಬೂವನಹಳ್ಳಿ ಗ್ರಾಮದಲ್ಲಿ ಮುಖ್ಯರಸ್ತೆ, ಸಣ್ಣ ರಸ್ತೆ ಮತ್ತು ಚರಂಡಿಗಳ ಸ್ಥಿತಿಗತಿಗಳ ಕುರಿತು ಗ್ರಾಮಸ್ಥರೊಂದಿಗೆ ಸರ್ವೇ ಕಾರ್ಯ , ಮುಂಬರುವ ದಿನಗಳಲ್ಲಿ ಶೀಘ್ರವಾಗಿ ಗ್ರಾಮದ ರಸ್ತೆಗಳನ್ನು ಕಾಂಕ್ರೀಟ್ ರಸ್ತೆಗಳನ್ನಾಗಿ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಮಾಡುವುದಾಗಿ ತಿಳಿಸಿದ ಶಾಸಕ ಪ್ರೀತಮ್ ಜೆ ಗೌಡ (ಹಾಸನ ವಿಧಾನ ಸಭಾಕ್ಷೇತ್ರ ಶಾಸಕರು)

ಹಾಸನದ ನಗರಸಭೆಯ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಕಚೇರಿಯಲ್ಲಿ ನಡೆದ ಶಾಸ್ತ್ರೋಕ್ತವಾದ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಪ್ರೀತಮ್ ಜೆ ಗೌಡರ ಸಮ್ಮುಖದಲ್ಲಿ ಅಧಿಕಾರ ಪದಗ್ರಹಣ ಸಂದರ್ಭ

ಹಾಸನ ನಗರದ ವಿವೇಕನಗರಕ್ಕೆ ಭೇಟಿ ನೀಡಿದ ಶಾಸಕ ಅಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಕುರಿತು ಪರಿಶೀಲನೆ.

ಹಾಸನದ ಹನುಮಂತಪುರ ಪಂಚಾಯಿತಿಯ ಅಗಿಲೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕ ಪ್ರೀತಮ್ ಜೆ ಗೌಡ , ಮಹಾಮಾರಿ ಕೊರೋನ ಸೋಂಕು ಹರಡುವಿಕೆ ತಡೆಗಟ್ಟಲು ವ್ಯಾಕ್ಸಿನ್ ಅನ್ನು ನೀಡುತ್ತಿರುವ ಕುರಿತು ಮಾಹಿತಿ ಪಡೆದುಕೊಂಡು ಮುಂದಿನ ದಿನಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ತಪ್ಪದೇ ವ್ಯಾಕ್ಸಿನ್ ನೀಡುವಂತೆ ಸೂಚನೆ.

#preethamjgowda #hassan

LEAVE A REPLY

Please enter your comment!
Please enter your name here