ಹಾಸನ / ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋತಿದ್ದ ಉದ್ಯಮಿ ಹಾಗೂ ಎಂ.ಟೆಕ್ ಪದವೀಧರರಾಗಿರುವ ಅವರು ಚಲನಚಿತ್ರ ನಿರ್ಮಾಣದಲ್ಲೂ ತೊಡಗಿದ್ದು, ಹಣಕಾಸು ವಹಿವಾಟು ನಡೆಸುತ್ತಿದ್ದ ಶರತ್ ರಾಮಣ್ಣ ಅವರನ್ನು ಸಿಐಡಿ ಪೊಲೀಸರು ಸೋಮವಾರ ರಾತ್ರಿ ಬಂಧಿಸಿ, ಬೆಂಗಳೂರಿಗೆ ಕರೆದೊಯ್ದಿದ್ದಾರೆ., ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಶ್ರವಣಬೆಳಗೊಳ ಮೂಲದ ವ್ಯಕ್ತಿಯೊಬ್ಬರಿಂದ 40 ಲಕ್ಷ ರೂ ಪಡೆದ ಆರೋಪದಡಿ ಅವರನ್ನು ಬಂಧಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ , ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಪರವಾಗಿ ಪ್ರಚಾರ ನಡೆಸಿದರೆಂಬ ಕಾರಣಕ್ಕೆ ಕಾಂಗ್ರೆಸ್‌ನಿಂದ ಅವರನ್ನು ಉಚ್ಚಾಟನೆ ಮಾಡಲಾಗಿತ್ತಂತೆ. ನಾಗಮಂಗಲದಲ್ಲಿ ಅವರ ಒಡೆತನದ ವಾಣಿಜ್ಯ ಕಟ್ಟಡದಲ್ಲೇ ತಾಲ್ಲೂಕು ಕಾಂಗ್ರೆಸ್ ಕಚೇರಿ, ಕಾಂಗ್ರೆಸ್ ಮುಖಂಡ ಎನ್.ಚಲುವರಾಯಸ್ವಾಮಿ ಅವರ ಕಚೇರಿಯು ಇದೆ. ಇನ್ನಷ್ಟು ಮಾಹಿತಿ ತನಿಖೆ ಯಿಂದಷ್ಟೇ ತಿಳಿಯಬೇಕಿದೆ
Home Hassan Taluks Channarayapattana PSI ಅಕ್ರಮ ನೇಮಕಾತಿ ಪ್ರಕರಣ ; ಹಾಸನ ಮೂಲದ ವ್ಯಕ್ತಿಯೊಬ್ಬರಿಂದ 40 ಲಕ್ಷ ಪಡೆದ ಆರೋಪದಡಿ...