ಪೋಲಿಸ್ ಸಬ್ ಇನ್ಸಪೆಕ್ಟರ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

1

ಹಾಸನ ಜ.22 (ಹಾಸನ್_ನ್ಯೂಸ್ !, ರಾಜ್ಯ ಪೋಲಿಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಪೋಲಿಸ್ ಸಬ್ ಇನ್ಸಪೆಕ್ಟರ್ (ಸಿವಿಲ್),(ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಒಟ್ಟು545 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ. ಖಾಲಿ ಹುದ್ದೆಗಳ ವರ್ಗೀಕರಣವನ್ನು ಹಾಗೂ ಅರ್ಹತಾ ಷರತ್ತುಗಳಿಗೆ ಅದಿಕೃತ ವೆಬ್‍ಸೈಟ್  www.recruitment.ksp.gov.inನಲ್ಲಿ ಅಧಿಸೂಚನೆಯನ್ನು ಗಮನಿಸಬಹುದಾಗಿದೆ.
ಸಾಮಾನ್ಯ ವರ್ಗ, ಪ್ರವರ್ಗ 2(ಎ),2(ಬಿ),3(ಎ),3(ಬಿ) ಸೇರಿದ ಅಭ್ಯರ್ಥಿಗಳಿಗೆ ರೂ 500/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 250 /-    ಶುಲ್ಕ ಫೆ.22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಶುಲ್ಕ ಪಾವತಿಗೆ ಫೆ. 24 ರಂದು ಕೊನೆಯ ದಿನವಾಗಿದೆ –  ಪಿ.ಎಸ್.ಐ  ನೇಮಕಾತಿ ಸಮಿತಿ ಅಧ್ಯಕ್ಷರು ಹಾಗೂ ಅಡಿಷನಲ್ ಡೈರೆಕ್ಟರ್ ಜನರಲ್  ಆಫ್ ಪೋಲಿಸ್ ತಿಳಿಸಿದ್ದಾರೆ.

1 COMMENT

LEAVE A REPLY

Please enter your comment!
Please enter your name here