ಮೊನ್ನೆ ಗುಲ್ಬರ್ಗದಲ್ಲಿ ಹಾಸನದ ಅಭ್ಯರ್ಥಿಗಳು PWD ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಆಗದವರಿಗೆ ಮತ್ತೊಂದು ಅವಕಾಶ

0

ಆಯೋಗವು ದಿನಾಂಕ: 14-12-2021 ರಂದು ನಡೆಸಿದ ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಅಭಿಯಂತರರು ವಿಭಾಗ-1 (ಸಿವಿಲ್) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಲಬುರಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಲು ಹಾಸನ – ಸೋಲಾಪುರ ಎಕ್ಸ್‌ಪ್ರೆಸ್ ಮತ್ತು ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಭ್ಯರ್ಥಿಗಳು ಸದರಿ ರೈಲು ನಿಗದಿತ ವೇಳೆಗೆ ಕಲಬುರಗಿ ಕೇಂದ್ರವನ್ನು ತಲುಪಲು ತಡವಾದ ಹಿನ್ನೆಲೆಯಲ್ಲಿ ಆಯೋಗವು ದಿನಾಂಕ: 14-12-2021ರಂದು ಹೊರಡಿಸಿದ ಪ್ರಕಟಣೆಯಲ್ಲಿ ಕಲಬುರಗಿ ಕೇಂದ್ರದಲ್ಲಿನ ಬೆಳಗ್ಗಿನ ಅಧಿವೇಶನದ ಪರೀಕ್ಷೆಗೆ ಅಭ್ಯರ್ಥಿಗಳು ಹಾಜರಾಗಲು ಸಾಧ್ಯವಾಗಿಲ್ಲವೆಂದು ತಿಳಿದು ಬಂದಿರುವ ಹಿನ್ನೆಲೆಯಲ್ಲಿ ಈ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಮಾತ್ರ ಆಯೋಗವು ಸೂಕ್ತ ನಿರ್ಣಯ ಕೈಗೊಳ್ಳುವುದು. ಈ ಹಿನ್ನೆಲೆಯಲ್ಲಿ ಎಲ್ಲಾ ಅಭ್ಯರ್ಥಿಗಳು ಮಧ್ಯಾಹ್ನ ನಡೆಯುವ ಪರೀಕ್ಷೆಗೆ ಕೂಡಲೇ ಹಾಜರಾಗಲು ಸೂಚಿಸಿವೆ ” ಎಂದು ತಿಳಿಸಲಾಗಿತ್ತು.

ಆದರಂತೆ ಕಲಬುರಗಿ ಪರೀಣಾ ಕೇಂದ್ರಗಳಲ್ಲಿ ಬೆಳಗ್ಗಿನ ಅಧಿವೇಶನದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೇ ಮಧ್ಯಾಹ್ನದ ಅಧಿವೇಶನದ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಮಾತ್ರ ಸಾಮಾನ್ಯ ಪತ್ರಿಕೆ-1 ರ ಮರು ಪರೀಕ್ಷೆಯನ್ನು ದಿನಾಂಕ:29-12-2021 ಬೆಂಗಳೂರು ಕೇಂದ್ರದಲ್ಲಿ ನಡೆಸಲು ರಂದು

ಆಯೋಗವು ನಿರ್ಣಯಿಸಿರುತ್ತದೆ.

ಆದ್ದರಿಂದ ಈ ರೀತಿ ಕಲಬುರಗಿ ಕೇಂದ್ರದಲ್ಲಿ ಬೆಳಗ್ಗಿನ ಅಧಿವೇಶನದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೇ ಮಧ್ಯಾಹ್ನದ ಅಧಿವೇಶನದ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಕೂಡಲೇ ಈ ಕೆಳಕಂಡ ದಾಖಲೆಗಳನ್ನು ದಿನಾಂಕ:22-12-2021ರೊಳಗಾಗಿ ಕಡ್ಡಾಯವಾಗಿ ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು, ಇವರಿಗೆ ಸಲ್ಲಿಸುವಂತೆ ಸೂಚಿಸಿದೆ. ಒಂದು ವೇಳೆ ದಾಖಲೆಗಳನ್ನು ಸಲ್ಲಿಸಲು ವಿಫಲವಾದ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ.

LEAVE A REPLY

Please enter your comment!
Please enter your name here