ರಣಘಟ್ಟ ನೀರಾವರಿ ಯೋಜನೆಗೆ ಮುಖ್ಯ ಮಂತ್ರಿಗಳಿಂದ ಗುದ್ದಲಿ ಪೂಜೆ :ಸಚಿವ ಕೆ. ಗೋಪಾಲಯ್ಯ
ಹಾಸನ.ಅ.27 : ಬೇಲೂರು ತಾಲ್ಲೂಕು ಹಳೇಬೀಡಿನ ರಣಘಟ್ಟ ಕುಡಿಯುವ ನೀರಿನ ಯೋಜನೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಕ್ಟೋಬರ್ 30 ರಂದು ಮಧ್ಯಾಹ್ನ 3 ಗಂಟೆಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ತಿಳಿದಿದ್ದಾರೆ.
ಕಾರ್ಯಕ್ರಮ ವೇದಿಕೆ ನಿರ್ಮಾಣ ಸಂಬಂಧ ಅಧಿಕಾರಿಗಳೊಂದಿಗೆ ಇಂದು ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಲೂರು ತಾಲ್ಲೂಕು ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಕೆರೆಗಳಿಗೆ ನೀರು ಹರಿಸುವ ಒಳ್ಳೆಯ ಉದ್ದೇಶದಿಂದ ಯೋಜನೆ ಸಾಕಾರಗೊಳ್ಳಲಿದೆ ಎಂದರು.
ಇದೊಂದು ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಹಿಂದೆಯೇ ಅನುಷ್ಠಾನ ಆಗಬೇಕಿತ್ತು .ಸುಮಾರು 120 ಕೋಟಿ ರೂಪಾಯಿ ಅಂದಾಜು ವೆಚ್ಚದ ಈ ಯೋಜನೆಯಿಂದ ಎಂಟಕ್ಕೂ ಅಧಿಕ ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ ಎಂದರು.
ಕಾರ್ಯಕ್ರಮಕ್ಕೆ ಪುಷ್ಪಗಿರಿ ಮತ್ತು ಸಿರಿಗೆರೆಯ ಶ್ರೀಗಳು ಆಗಮಿಸಲಿದ್ದಾರೆ. ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಆಹ್ನಾನಿಸಲಾಗಿದೆ ನೀರಾವರಿ ಸಚಿವರು ಕಾರ್ಯಕ್ರಮದಲ್ಲಿ ಬಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಕೆ.ಎಸ್.ಲಿಂಗೇಶ್ ,ಜಿಲ್ಲಾಧಿಕಾರಿ ಆರ್.ಗಿರೀಶ್ , ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ. ಎ ಪರಮೇಶ್ , ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ, ಸಕಲೇಶಪುರ ವಿಭಾಗದ ಉಪವಿಭಾಗಾಧಿಕಾರಿ ಪ್ರತೀಕ್ ಬಯಾಲ್ ಹಾಗೂ ಮತ್ತಿತರರು ಅಧಿಕಾರಿಗಳು ಹಾಜರಿದ್ದರು.
#hassannews #belur #belurnews #ranaghattaproject