ಹಾಸನ ಜಿಲ್ಲಾದ್ಯಾಂತ ಇರುವ ನ್ಯಾಯಬೆಲೆ ಅಂಗಡಿಗಳಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ)ವನ್ನು ಉಚಿತವಾಗಿ ಮಾಡಲು ಸೆಪ್ಟೆಂಬರ್-2021 ರ ಮಾಹೆಯಲ್ಲಿ ಸರ್ಕಾರವು ಕೊನೆಯ ಅವಕಾಶ ಕಲ್ಪಿಸಿದ್ದು, ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಬೆರಳಚ್ಚು ನೀಡಿ ನೊಂದಣಿ ಮಾಡಿಸಿಕೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಆಧಾರ್ ದೃಢೀಕರಣ (ಇ-ಕೆವೈಸಿ) ಕಾರ್ಯವನ್ನು 2020ರ ಫೆಬ್ರವರಿಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಬೆರಳಚ್ಚು ನೀಡಿ ನೊಂದಣಿ ಮಾಡಿಸಿಕೊಳ್ಳದವರು ಸೆ.1 ರಿಂದ 10ರವರೆಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಕಡ್ಡಾಯವಾಗಿ ನೊಂದಾಯಿಸಿಕೊಳ್ಳುವಂತೆ ತಿಳಿಸಿದ್ದಾರೆ.
ಆಧಾರ್ ದೃಢೀಕರಣ (ಇ-ಕೆವೈಸಿ) ಮಾಡದೇ ಇರುವ ಫಲಾನುಭವಿಗಳಿಗೆ ಪಡಿತರ ಹಂಚಿಕೆಯ ಬಗ್ಗೆ ಸರ್ಕಾರವು ಮರು ಆಲೋಚಿಸುತ್ತದೆ. ಪಡಿತರ ಚೀಟಿದಾರರಿಗೆ ಇದು ಕೊನೆಯ ಅವಕಾಶವಾಗಿದ್ದು, ತಾವುಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಇ-ಕೆವೈಸಿ ಮಾಡಿಸಿಕೊಳ್ಳಲು ಸೂಚಿಸಲಾಗಿದೆ.
ಈ ಬಗ್ಗೆ ಸಂದೇಹವಿದ್ದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ತಾಲ್ಲೂಕು ಕಚೇರಿಯಲ್ಲಿ ಆಹಾರ ಶಿರಸ್ತೇದಾರರು/ಆಹಾರ ನಿರೀಕ್ಷಕರನ್ನು ಸಂಪರ್ಕಿಸಲು ಕೋರಿದೆ.