ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೂ ಒಂದೊಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ( ಕೆಪಿಎಸ್)ಗಳನ್ನು ತೆರೆ ಯಬೇಕು ಎಂದು ಜೆಡಿಎಸ್ ಮುಖಂಡ, ಮಾಜಿಸಚಿವ ಎಚ್.ಡಿ.ರೇವಣ್ಣ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಿರುವ ಕೆಪಿಎಸ್ ಶಾಲೆಗಳು ಉತ್ತಮವಾಗಿ ನಡೆಯುತ್ತಿದ್ದು, ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಪೈಪೋಟಿ ನೀಡುತ್ತಿವೆ. ಆದ್ದರಿಂದ ಗ್ರಾಮೀಣ ಪ್ರದೇಶದಲ್ಲಿಯೂ ಗುಣಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ನೀಡಲು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಬೇಕು ಎಂದರು.ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಕೆಪಿಎಸ್ ಶಾಲೆಗಳನ್ನು ತೆರೆದರು.
1000 ಸರ್ಕಾರಿ ಪಿ.ಯು. ಕಾಲೇಜು, 50 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಮಂಜೂರಾತಿ ನೀಡಿದ್ದರು ಎಂದ ಅವರು, ಶಾಲೆಗಳಿಗೆ ಶಿಕ್ಷಕರು, ಕಾಲೇಜುಗಳಿಗೆ ಉಪನ್ಯಾಸಕರ ನೇಮಕಾತಿ ಮಾಡಲು ಸರ್ಕಾರ ಹಿಂದೇಟು ಹಾಕುತ್ತಿರುವುದು ಶೋಚನೀಯ. ತಕ್ಷಣವೇ ಸರ್ಕಾರ ಖಾಲಿ ಇರುವ ಶಿಕ್ಷಕರು, ಉಪನ್ಯಾಸಕರ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಪಡಿಸಿದರು.