ಇಂದು ಹಾಸನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಸಂಸದರು ಮತ್ತು ಶಾಸಕರೊಂದಿಗೆ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನೆ ಕುರಿತು ಸಭೆ

  0

  ಹಾಸನ : ಇಂದು ಹಾಸನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು,ಸಂಸದರು ಮತ್ತು ಶಾಸಕರೊಂದಿಗೆ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನೆ ಕುರಿತು ಸಭೆ ನಡೆಸಿದರು. ವಿಶ್ವೇಶ್ವರಯ್ಯ ಜಲ ನಿಗಮ ವತಿಯಿಂದ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ಕುಡಿಯುವ ನೀರಿನ ಯೋಜನೆ ವಿಳಂಬ ಆಗದಂತೆ ಕಾಮಗಾರಿ ಚುರುಕುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

  ಸಕಲೇಶಪುರ : ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ, ಎತ್ತಿನ ಹೊಳೆ ಯೋಜನೆಯ ಪ್ರಗತಿಪರಿಶೀಲನೆ ಮಾನ್ಯ ಉಪಮುಖ್ಯಮಂತ್ರಿಗಳು ಮತ್ತು ಜನಸಂಪನ್ಮೂಲ ಸಚಿವರಾದ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ಸಂಸದರಾದ ಡಿ.ಕೆ ಸುರೇಶ್, ಪ್ರಜ್ವಲ್ ರೇವಣ್ಣ, ಅರಸೀಕೆರೆ ಶಾಸಕರಾದ ಶಿವಲಿಂಗೇಗೌಡ, ಸಕಲೇಶಪುರ ಕ್ಷೇತ್ರ ಶಾಸಕರಾದ ಸಿಮೆಂಟ್ ಮಂಜುರವರು ಭಾಗಿಯಾಗಿ ಎತ್ತಿನಹೊಳೆ ಕಾಮಗಾರಿಗಳ ಬಗ್ಗೆ ಚರ್ಚೆ ನೆಡೆಸಿದರು. ಪಶ್ಚಿಮಘಟ್ಟದಿಂದ ಕೋಲಾರದವರೆಗೆ ನೀರನ್ನು ಹರಿಸುವ ಯೋಜನೆಯನ್ನು ತಯಾರು.

  ಸುಮಾರು 24 ಸಾವಿರ ಕೋಟಿ ರೂಪಾಯಿ ವೆಚ್ಚದ ಯೋಜನೆ ಇದಾಗಿದ್ದು, ಈಗಾಗಲೇ 14 ಸಾವಿರ ಕೋಟಿ ರೂಪಾಯಿ ಯೋಜನೆಗಾಗಿ ಖರ್ಚು ಮಾಡಲಾಗಿದೆ. ಈ ಯೋಜನೆಯ ಕಾಮಗಾರಿಯ ಪ್ರಗತಿ ಪರಿಶೀಲನೆ ವೇಳೆ ಕೆಲವು ವಿಷಯಗಳು ಡಿ.ಕೆ‌‌‌.ಶಿವಕುಮಾರ್ ಅವರ ಗಮನಕ್ಕೆ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಮ್ಮದೇ ಕಾನೂನುಗಳನ್ನು ರೂಪಿಸುತ್ತಿದ್ದಾರೆ ಎನ್ನುವ ದೂರುಗಳು ಕೇಳಿ ಬಂದಿವೆ . ತಕ್ಷಣವೇ ಈ ಕುರಿತು ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ಅರಣ್ಯ ವ್ಯಾಪ್ತಿಯಲ್ಲಿ ಈ ಯೋಜನೆಯ ಕಾಮಗಾರಿ ನಡೆಯುತ್ತಿದ್ದು, ಅರಣ್ಯ ಇಲಾಖೆಯವರು ಕಾಮಗಾರಿಗೆ ಸಹಕರಿಸುವುದಾಗಿ ಒಪ್ಪಿಗೆ ಸೂಚಿಸಿದ್ದಾರೆ. ಆದಷ್ಟು ಬೇಗ ಈ ಯೋಜನೆ ಪೂರ್ಣಗೊಳಿಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ತಿಳಿಸಿದೆ ಎಂದರು. ತಮಿಳುನಾಡಿಗೆ ನೀರು ಹರಿಸಿರುವ ಸಂಬಂಧ ಮಂಡ್ಯದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ತಮಿಳುನಾಡಿಗೆ 32 ಟಿಎಂಸಿ ನೀರು ಬಿಡಬೇಕು. ಈಗಾಗಲೇ 24 ಟಿಎಂಸಿ ನೀರು ಬಿಡಲಾಗಿದೆ. ಎಂಟು ಟಿಎಂಸಿ ನೀರು ಬಿಡಲು ತಮಿಳುನಾಡು ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದೆ.

  ಈ ಬಗ್ಗೆ ಪ್ರತಿಪಕ್ಷಗಳ ಸಭೆಯನ್ನು ಕರೆಯಲಾಗಿದ್ದು ರೈತರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ವಿವರಿಸಿದರು. ಈ ಸಂದರ್ಭದಲ್ಲಿ ಸಂಸದ ಪ್ರಜ್ವಲ್ ರೇವಣ್ಣ , ಶಾಸಕರಾದ ಕೆ.ಎಂ ಶಿವಲಿಂಗೇಗೌಡ, ಸಿಮೆಂಟ್ ಮಂಜು, ಜಿಲ್ಲಾಧಿಕಾರಿ ಸತ್ಯಭಾಮ, ಎಸ್ ಪಿ ಹರಿರಾಂ ಶಂಕರ್, ಜಿ.ಪಂ. ಸಿಇಒ ಪೂರ್ಣಿಮಾ, ಇತರರು ಇದ್ದರು. ಕಾಮಗಾರಿ ಶರವೇಗದಲ್ಲಿ ಮುಂದುವರೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಂದಿನ 100 ದಿನದಲ್ಲಿ 42 ಕಿ.ಮೀ.ವರೆಗಿನ ಮೊದಲ ಹಂತದ ಎತ್ತಿನಹೊಳೆ ಯೋಜನೆಗೆ ನೀರು ಹರಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡುವ ಮೂಲಕ ಎತ್ತಿನಹೊಳೆ ಯೋಜನೆ ಯಶಸ್ಸಿಗೆ ಸ್ಪಂದಿಸಬೇಕು ಎಂದು ಸಲಹೆ ನೀಡಿದರು.

  LEAVE A REPLY

  Please enter your comment!
  Please enter your name here