ಸಕಲೇಶಪುರ -ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಭೆ

0

ಸಕಲೇಶಪುರ :- ಪ್ರತಿವರ್ಷದಂತೆ ಈ ಬಾರಿಯೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿಯಂತೆ ನಡೆಸಲಾಗುವುದು ಎಂದು ತಹಸೀಲ್ದಾರ್‌ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರಾದ ಜೈಕುಮಾರ್ ತಿಳಿಸಿದರು.

ಬುಧವಾರ ಮಿನಿ ವಿಧಾನಸೌಧದಲ್ಲಿ ನಡೆದ

ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನ.1 ರಂದು ಪಟ್ಟಣದ ಮಾದರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು ಕೋವಿಡ್19 ಸೋಂಕು ಇರುವ ಹಿನ್ನೆಲೆ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿಯಂತೆ ಅನುಸರಿಸಿ ಕಾರ್ಯಕ್ರಮ ನಡೆಯಲು ಬೇಕಾದ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಬೇಕೆಂದು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿದರು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಅಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಸಕಲೇಶ್ವರ ಸ್ವಾಮಿ ದೇವಸ್ಥಾನದಿಂದ ಕಾರ್ಯಕ್ರಮ ನಡೆಯುವ ವೇದಿಕೆ ವರೆಗೂ ಡೊಳ್ಳು ಕುಣಿತ, ಕಂಸಾಳೆ, ವಿವಿಧ ಸ್ತಬ್ದಚಿತ್ರಗಳೊಂದಿಗೆ ಬೆಳ್ಳಿರಥದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರದ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ
ವಿದ್ಯಾರ್ಥಿಗಳು, ಜಾನಪದ ಕಲಾವಿದರು, ಸಾಹಿತಿಗಳು, ಕ್ರೀಡಾಪಟುಗಳು ಸೇರಿದಂತೆ ಇನ್ನಿತರ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಸನ್ಮಾನಿಸಲಾಗುವುದು ಎಂದು ಹೇಳಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘಟನೆಯ ಮುಖಂಡರು ಹಾಗೂ ಮಾಧ್ಯಮ ಮಿತ್ರರು ಉತ್ತಮವಾದ ಸಲಹೆಗಳನ್ನು ನೀಡಿದ್ದಾರೆ ಅವೆಲ್ಲವನ್ನು ಅಳವಡಿಸಿಕೊಂಡು ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ. ಆರ್ ಹರೀಶ್ ಡಿವೈಎಸ್ಪಿ ಅನಿಲ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಆನಂದಮೂರ್ತಿ ಸೇರಿದಂತೆ ಇನ್ನಿತರರಿದ್ದರು.

ಪೂರ್ವಭಾವಿ ಸಭೆಗೆ ಕನ್ನಡಪರ ಸಂಘಟನೆಗಳಿಗೆ ಆಹ್ವಾನ ನೀಡಿಲ್ಲ ಎಂಬ ದೂರು ಕೇಳಿಬಂದಿದೆ. ಹಿನ್ನಲೆಯಲ್ಲಿ ದಿ.23 ಶನಿವಾರದಂದು ಕನ್ನಡ ರಾಜ್ಯೋತ್ಸವ ಕುರಿತು ಮತ್ತೊಂದು ಸುತ್ತಿನ ಪೂರ್ವಭಾವಿ ಸಭೆ ನಡೆಸಲಾಗುತ್ತದೆ. ಈ ಸಭೆಗೆ ತಾಲೂಕಿನ ಎಲ್ಲಾ ಸಂಘಟನೆಗಳು ಭಾಗವಹಿಸಬೇಕೆಂದು ಮನವಿ .

ತಹಸೀಲ್ದಾರ್ ಜೈಕುಮಾರ್

LEAVE A REPLY

Please enter your comment!
Please enter your name here