ಸಕಲೇಶಪುರ: ಪುರಸಭೆ ಉಪಾಧ್ಯಕ್ಷರಾಗಿ ಜ್ಯೋತಿ ರಾಜಕುಮಾರ್ ಆಯ್ಕೆ

0

ಸಕಲೇಶಪುರ:  ಪುರಸಭೆಯ ಉಪಾಧ್ಯಕ್ಷರಾಗಿ ರಾಜಕುಮಾರ್ ಜ್ಯೋತಿ ರಾಜಕುಮಾರ್ ಆಯ್ಕೆಯಾಗಿದ್ದಾರೆ.

ಝರೀನಾ ರಶೀದ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜ್ಯೋತಿ ರಾಜಕುಮಾರ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಇವರ ಆಯ್ಕೆಯನ್ನು ಚುನಾವಣಾಧಿಕಾರಿ ಹಾಗೂ ತಾಸಿಲ್ದಾರ್ ಜಯಕುಮಾರ್ ಘೋಷಿಸಿದರು.
ಪುರಸಭೆಯ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಪುರಸಭೆಯ ಸದಸ್ಯರು ಹಾಜರಿದ್ದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಪಾಧ್ಯಕ್ಷ ಜ್ಯೋತಿ ರಾಜಕುಮಾರ್, ಪುರಸಭೆಯ ಅಭಿವೃದ್ಧಿಗಾಗಿ ಶ್ರಮಿಸಸುತ್ತೇನೆ ಈಗಾಗಲೇ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲು ಅಧ್ಯಕ್ಷರಿಗೆ ಸಹಕರಿಸುವುದಾಗಿ ತಿಳಿಸಿದರು.
ಪುರಸಭೆಯ ಮಾಜಿ ಅಧ್ಯಕ್ಷ
ಇಬ್ರಾಹಿಂ ಯಾದ್ಹಾರ್ ಮಾತನಾಡಿ ಜೆಡಿಎಸ್ ಪಕ್ಷದ ವರಿಷ್ಠರ ಒಪ್ಪಂದದಂತೆ ಸರಿನಾ ರಶೀದ್ ರವರು ರಾಜೀನಾಮೆ ಸಲ್ಲಿಸಿದ್ದ ಸ್ಥಾನಕ್ಕೆ ಚುನಾವಣೆ ನಡೆಯಿತು ಪಕ್ಷ ಜ್ಯೋತಿ ರಾಜಕುಮಾರ್ ಅವರ ಆಯ್ಕೆಗೆ ಒಲವು ವ್ಯಕ್ತಪಡಿಸಿದರು. ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಎಂದು ಹೇಳಿದರು.
ಈ ಸಂದರ್ಭದಲ್ಲಿ  ಪುರಸಭೆ ಮುಖ್ಯಾಧಿಕಾರಿ ಸ್ಟೀವನ್ ಪ್ರಕಾಶ್ ಹಾಗೂ   ಪುರಸಭಾ ಸದಸ್ಯರು ಹಾಜರಿದ್ದರು. ಕಾಂಗ್ರೆಸ್ ಪಕ್ಷದ ಸದಸ್ಯೆ ಅನ್ನಪೂರ್ಣೇಶ್ವರಿ,
ಆನೆಮಹಾಲ್ ಗ್ರಾ ಪಂ ಸದಸ್ಯ ಹಸೇನಾರ್  ಸೇರಿದಂತೆ ಅನೇಕರು ಅಭಿನಂದಿಸಿದರು.

LEAVE A REPLY

Please enter your comment!
Please enter your name here