ಸಕಲೇಶಪುರ ತಾಲ್ಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ನಿರ್ವಹಣೆಯ ಕ್ರಮಗಳನ್ನು ಪರಿಶೀಲನೆ ನಡೆಸಿದ ಸಂಸದ ಪ್ರಜ್ವಲ್ ರೇವಣ್ಣ
ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯು ಪ್ರಮುಖ ಸಮಸ್ಯೆಯಾಗಿದ್ದು ಈಗಾಗಲೇ ಸಂಬಂಧಪಟ್ಟ ಇಲಾಖೆಯ ಸಚಿವರ ಜೊತೆ ಮಾತನಾಡಿದ್ದು ಶೀಘ್ರವಾಗಿ ನಿಯೋಜನೆ ಮಾಡಲು ಮನವಿ ಮಾಡಿದ್ದೇನೆಂದು ತಿಳಿಸಿದರು
ನಂತರ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಸಭೆ ನಡೆಸಿ ವ್ಯಾಕ್ಸಿನೇಷನ್ ಡ್ರೈವ್ ಬಗ್ಗೆ,
ಕಟ್ಟುನಿಟ್ಟಿನ ಲಾಕ್ಡೌನ್ ಕ್ರಮಗಳ ಬಗ್ಗೆ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮಗಳಿಗೆ ಸೂಚಿಸಿದರು
ಸಭೆಯಲ್ಲಿ ಎಸಿ ಗಿರೀಶ್ ನಂದನ್ ರವರು, ತಹಶೀಲ್ದಾರ್ ಜೈಕುಮಾರ್ ರವರು, DYSP ಗೋಪಿ ರವರು, ತಾಲ್ಲೂಕು ಪಂಚಾಯಿತಿ
ಕಾರ್ಯನಿರ್ವಹಣಾಧಿಕಾರಿಗಳು, ವೈದ್ಯರು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು