10 ನೇ ತರಗತಿ ವಿದ್ಯಾರ್ಥಿನಿ 5 ತಿಂಗಳ ಗರ್ಭಿಣಿ : ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು : ಜೈಲು ಪಾಲಾದ ಐಟಿಐ ವಿದ್ಯಾರ್ಥಿ

0

ಸಕಲೇಶಪುರ : ಹತ್ತನೇ ತರಗತಿ ವಿದ್ಯಾರ್ಥಿನಿಯರ್ವಳು ಗರ್ಭಿಣಿಯಾಗಿರುವ (Pregnant) ಆಘಾತಕಾರಿ ಘಟನೆ ಸಕಲೇಶಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.ಹಾಸನದ ಖಾಸಗಿ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಜೀವನ್ (21) ಎಂಬ ವಿದ್ಯಾರ್ಥಿಯೊಬ್ಬ ಹತ್ತನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಪ್ರೀತಿಸುವ ನೆಪದಲ್ಲಿ

ನಾಟಕವಾಡಿ ಅತ್ಯಾಚಾರ ನಡೆಸಿ ಗರ್ಭಿಣಿಯಾಗಲು ಕಾರಣನಾಗಿರುವ ಅನುಮಾನಗಳು ವ್ಯಕ್ತವಾಗಿವೆ.ತಾಲೂಕಿನ ಬಾಳ್ಳುಪೇಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಭಯದಿಂದ ತನ್ನ ಮೇಲಾದ ಅತ್ಯಾಚಾರವನ್ನು ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ಇದೀಗ ಐದು ತಿಂಗಳ ನಂತರ ಆಕೆ ಗರ್ಭಿಣಿಯಾಗಿದ್ದರಿಂದ ಈ ವಿಷಯ

ಪೋಷಕರಿಗೆ ಗೊತ್ತಾಗಿದೆ. ಈ ಸಂಬಂಧ ವಿದ್ಯಾರ್ಥಿನಿ ಪೋಷಕರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದೆ.

LEAVE A REPLY

Please enter your comment!
Please enter your name here