ಹಾಸನ ಮಾ. 18 (ಹಾಸನ್_ನ್ಯೂಸ್ !, ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 2020-21 ನೇ ಸಾಲಿನ ಪ್ರವೇಶ ಪ್ರಾರಂಭವಾಗಿದ್ದು, ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ 6 ರಿಂದ 10ನೇ ತರಗತಿಯ ಹೊಸದಾಗಿ ಪ್ರವೇಶ ಪಡೆಯಲು ಆನ್ ಲೈನ್ ವಿಳಾಸ www.sw.Kar.nic.in/ www.st.kar.nic.in ನಲ್ಲಿ ಅರ್ಜಿ ಸಲ್ಲಿಸಿ, ಅರ್ಜಿಗಳನ್ನು ಸಂಬಂಧಪಟ್ಟ ವಿದ್ಯಾರ್ಥಿ ನಿಲಯಗಳಿಗೆ ನೀಡಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಹಾಸನ ದೂ. ಸಂ 08172-268960 ಸಂಪರ್ಕಿಸಬಹುದಾಗಿದೆ.