ನನ್ನ ಒಳ್ಳೆಯ ಸ್ನೇಹಿತ ಸಂಚಾರಿ ವಿಜಯ್ ಬ್ಯಾಡ್ಮಿಂಟನ್ ಅವರೊಂದಿಗೆ ಆಡಿದ ದಿನಗಳ ಬಗ್ಗೆ ನೆನೆದ ಸಂಸದ ಪ್ರಜ್ವಲ್

0

ಸಂಚಾರಿ ವಿಜಯ್ ಅವರ ಬಗ್ಗೆ ತಮ್ಮ ಮನದಾಳದ ಮಾತನ್ನಾಡಿದ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ

” ಸಂಚಾರಿ ವಿಜಯ್ ಅವರು ನನ್ನ ಆತ್ಮೀಯ ಸ್ನೇಹಿತರಲ್ಲೊಬ್ಬರು, ನಾವಿಬ್ಬರೂ ಒಟ್ಟಿಗೆ ಬ್ಯಾಡ್ಮಿಂಟನ್ ಆಡ್ತಾ ಇದ್ವಿ ವಿಜಯ್ ಅವರೊಂದಿಗೆ ಸಾಕಷ್ಟು ಸಮಯ ಕಳೆದಿದ್ದೇನೆ. ನಾನು ರಾಷ್ಟ್ರ ಪ್ರಶಸ್ತಿ ತೆಗೆದುಕೊಂಡಿದ್ದೇನೆ ಅನ್ನೋ ಒಂದು ಸಣ್ಣ ಅಹಂ ಕೂಡ ವಿಜಯ್ ಅವರಿಗೆ ಇರಲಿಲ್ಲ. ಅವರಿಗೆ ಸಮಾಜದ ಬಗ್ಗೆ ಒಂದು ವಿಶೇಷ ಕಾಳಜಿ ಇತ್ತು, ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗಿದ್ದರು. ತಮ್ಮ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.ವಿಜಯ್ ಇಂದು ನಮ್ಮೊಂದಿಗಿಲ್ಲ ಎನ್ನುವುದನ್ನು ಊಹಿಸಲೂ ಕಷ್ಟ ಆಗ್ತಾ ಇದೆ. ಒಬ್ಬ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡ ದುಃಖ ಇಂದು ನನ್ನನ್ನಾವರಿಸಿದೆ.

ಸಂಚಾರಿ ವಿಜಯ್ ಅವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಅಭಿಮಾನಿಗಳಿಗೆ ಕುಟುಂಬ ವರ್ಗದವರಿಗೆ ವಿಜಯ್ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ” – ಪ್ರಜ್ವಲ್ ರೇವಣ್ಣ (ಸಂಸದರು)

#SanchariVijay #prajwalrevanna

ಕಳೆದ ವರ್ಷದಿಂದ ಕೋವಿಡ್ ನಮ್ಮೆಲ್ಲರನ್ನೂ ಬಾಧಿಸುತ್ತಿದೆ, ಬಡವ ಬಲ್ಲಿದ ಎಂಬ ಭೇದವಿಲ್ಲದೆ ಎಲ್ಲರಿಗೂ ಎಲ್ಲಾ ವರ್ಗದವರಿಗೂ ಒಂದಲ್ಲ ಒಂದು ರೀತಿಯಲ್ಲಿ ಕೊರೊನಾದಿಂದ ಬಾಧಿಸಲ್ಪಟ್ಟವರೇ ಆಗಿದ್ದಾರೆ ಹೊರತು ಯಾರೂ ನೆಮ್ಮದಿಯಿಂದಿಲ್ಲ ಅನ್ನೋದು ಎಲ್ಲರಿಗೂ ತಿಳಿದ ವಿಷಯವೇ.
ಲಾಕ್ಡೌನ್’ನಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿರುವ ಬಡ ಜನತೆಗೆ ಹಾಸನದ Janapriya Hospital Hassan ಸಹಾಯ ಹಸ್ತ ಚಾಚಿದೆ. ನಿತ್ಯವೂ ಸಾವಿರಾರು ಜನಕ್ಕೆ ಆಹಾರ ವಿತರಿಸುವ ಮೂಲಕ ಹಸಿವು ನೀಗಿಸುವ ಕೆಲಸ ಮಾಡುತ್ತಿದೆ. ನೆನ್ನೆ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಕಾರ್ಯಕ್ರಮಕ್ಕೆ ನಾನೂ ಸಾಕ್ಷಿಯಾದೆ. – Prajwal Revanna (MP)

LEAVE A REPLY

Please enter your comment!
Please enter your name here