ವೈಕುಂಠ ಏಕಾದಶಿ ಹಾಗೂ ಸಂಕ್ರಾಂತಿ ಹಬ್ಬಗಳ ಪ್ರಯುಕ್ತ ಸರ್ಕಾರ ಸಾರ್ವಜನಿಕರಿಗೆ ಗೈಡ್ ಲೈನ್ಸ್ ಬಿಡುಗಡೆ

0

ದೇಶಾದ್ಯಂತ ಮತ್ತು ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ‘ಓಮಿಕ್ರೋನ್’ ವೈರಾಣು ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸಮ ಸಂಖ್ಯೆಯ ದಿನಾಂಕ:04.01.2022ರ ಆದೇಶಗಳಲ್ಲಿ ಪೂರ್ವಭಾವಿಯಾಗಿ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿದ್ದು, ಪ್ರತಿದಿನ ರಾತ್ರಿ 10 ರಿಂದ ಮರುದಿನ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕಫ್ಯೂವನ್ನೂ ಹಾಗೂ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5:00 ಗಂಟೆಯವರೆಗೆ ವಾರಾಂತ್ಯದ ಕರ್ಪೂವನ್ನು ಜಾರಿಗೊಳಿಸಲಾಗಿದೆ. ಕರ್ಫ್ಯೂ ಅವಧಿಯಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಇತರ ಎಲ್ಲಾ ವ್ಯಕ್ತಿಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಏತನ್ಮಧ್ಯೆ ಜನವರಿ ಮಾಹೆಯಲ್ಲಿ ವೈಕುಂಠ ಏಕಾದಶಿ ಹಾಗೂ ಮಕರ ಸಂಕ್ರಾಂತಿ ಮೊದಲಾದ ಹಬ್ಬಗಳ ಆಚರಣೆ ನಡೆಯಲಿದ್ದು, ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ಸಾರ್ವಜನಿಕರು ಕೋವಿಡ್ 19 ವೈರಾಣು ನಿಯಂತ್ರಣ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವ ಸಲುವಾಗಿ ವಿಪತ್ತು ನಿರ್ವಹಣಾ ಅಧಿನಿಯಮ, 2005 ರ ಸೆಕ್ಷನ್ 24(ಎಲ್)ರ ಅಡಿ  : ಈ ಕೆಳಕಂಡ ಮಾರ್ಗಸೂಚಿಗಳನ್ನು ಜಾರಿಗೊಳಿಸಿ ದ ಸರ್ಕಾರ . ಈ ಮಾರ್ಗಸೂಚಿಗಳನ್ನು ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಆಯುಕ್ತರು, ಕರ್ನಾಟಕದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಇತರ ಇಲಾಖಾ ಮುಖ್ಯಸ್ಥರು ಮತ್ತು ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

1. ವೈಕುಂಠ ಏಕಾದಶಿ ಹಾಗೂ ಸಂಕ್ರಾಂತಿ ಹಬ್ಬಗಳ ಪ್ರಯುಕ್ತ ದೇವಾಲಯದ ಶಾಸ್ತ್ರ ಸಂಪುದಾಯದಂತೆ ದೇವಾಲಯಗಳ ಒಳ ಆವರಣದಲ್ಲಿ ಮಾತ್ರ ದೈನಂದಿನ ಪೂಜಾ ಕೈಂಕರ್ಯಗಳನ್ನು ನಡೆಸಲು ಅನುಮತಿಸಿದೆ.

2. ವೈಕುಂಠ ಏಕಾದಶಿ ದಿನದಂದು ಈಗಾಗಲೇ ನಿಗದಿಪಡಿಸಿರುವಂತೆ ಪೂರ್ಣ ಪ್ರಮಾಣದ ಕೋವಿಡ್-19 ಲಸಿಕೆ ಪಡದ 50 ಜನರಿಗೆ ಮಾತ್ರ ಒಂದು ಬಾರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸತಕ್ಕದ್ದು, ಯಾವುದೇ ಇತರೆ ಸೇವೆ ಇತ್ಯಾದಿಗಳಿಗೆ ಅವಕಾಶವಿರುವುದಿಲ್ಲ.

3. ಹಬ್ಬಗಳ ಆಚರಣೆಯ ಸಲುವಾಗಿ ಯಾವುದೇ ರೀತಿಯ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮಗಳು ಇತ್ಯಾದಿಗಳನ್ನು ಆಯೋಜಿಸುವಂತಿಲ್ಲ.

ಬೆಂಗಳೂರು ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ಸ್ಥಳೀಯ ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿ ಇನ್ನೂ ಹೆಚ್ಚಿನ ನಿರ್ಬಂಧಗಳನ್ನು ವಿಧಿಸಲು ಕ್ರಮವಹಿಸತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದು ಹಾಸನ ಜಿಲ್ಲಾಧಿಕಾರಿ ನಾಳೆ ಈ ಬಗ್ಗೆ ಹೊಸ ಗೈಡ್ ಲೈನ್ಸ್ ಹೊರಡಿಸುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here