ಸಕಲೇಶಪುರ : ಕಳೆದ ಹಲವು ವರ್ಷಗಳಿಂದ ಭೂಕುಸಿತದ ಸಮಸ್ಯೆ ಎದುರಿಸುತ್ತಿರುವ ಅನೇಕ ಸ್ಥಳಗಳಿಗೆ ಭೇಟಿ ನೀಡಿ ಶೀಘ್ರವಾಗಿ ಶಾಶ್ವತ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು
ಜೂನ್ 24ರ ಶನಿವಾರ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲಿಸಿ ಹಲವಾರು ವರ್ಷಗಳಿಂದ ಈ ರಸ್ತೆಯ ಕಾಮಗಾರಿ ನಡೆಯುತ್ತಿದೆ. ತಾಂತ್ರಿಕ ಕಾರಣಗಳಿಂದ ಇಲ್ಲಿಯವರೆಗೆ ಕಾಮಗಾರಿ ಪೂರ್ಣಗೊಳಿಸಲು ಆಗಿಲ್ಲ. ನಾನು ಸಚಿವನಾದ ನಂತರ
ಈ ಸಮಸ್ಯೆ ನನ್ನ ಗಮನಕ್ಕೆ ಬಂತು. ಆ ಕಾರಣ ಇಂದು ರಸ್ತೆ ಪರಿಶೀಲನೆಗೆ ಆಗಮಿಸಿದ್ದೇನೆ. ನವೆಂಬರ್ 1 ರ ಒಳಗೆ ಹಾಸನದಿಂದ ಸಕಲೇಶಪುರದ ವರೆಗೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ್ದೇವೆ. 2024ರ ಮಾರ್ಚ್ ವರೆಗೆ ಸಂಪೂರ್ಣ ಕಾಮಗಾರಿ ಮುಗಿಸಲು ಕಾಲಾವಕಾಶ ಕೋರಿದ್ದಾರೆ. ಪ್ರತಿ ತಿಂಗಳೂ ಈ ಬಗ್ಗೆ ಸಭೆ ಕರೆದು ಕಾಮಗಾರಿ ಬಗ್ಗೆ ಗಮನ ಕೊಡುತ್ತೇವೆ. ಹಿಂದೆ ಏನಾಗಿದೆ ಎಂಬುದಕ್ಕೆ ಹೋಗೋದಿಲ್ಲ. ಮುಂದೇ
ಏನಾಗಬೇಕು ಎಂಬ ಚಾಲೆಂಜ್ ನಮ್ಮ ಸರ್ಕಾರದ ಮುಂದಿದೆ. ಈ ಕಾಮಗಾರಿಯನ್ನ ಮುಂದೆ ಸಮರ್ಥವಾಗಿ ನಿರ್ವಹಿಸುತ್ತೇವೆ., ನವೆಂಬರ್ 1 ರ ಒಳಗೆ ಹಾಸನದಿಂದ ಸಕಲೇಶಪುರದ ವರೆಗೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ್ದೇವೆ. 2024ರ ಮಾರ್ಚ್ ವರೆಗೆ ಸಂಪೂರ್ಣ ಕಾಮಗಾರಿ ಮುಗಿಸಲು ಕಾಲಾವಕಾಶ ಕೋರಿದ್ದಾರೆ. ಪ್ರತಿ ತಿಂಗಳೂ ಈ ಬಗ್ಗೆ ಸಭೆ ಕರೆದು
ಕಾಮಗಾರಿ ಬಗ್ಗೆ ಗಮನ ಕೊಡುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ