ಕರ್ನಾಟಕ ಸರ್ಕಾರದ ವತಿಯಿಂದ ಸರ್ಕಾರಿ ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆಗಳಲ್ಲಿ ಕಲಿಯುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ (ಹೊಸದು/ನವೀಕರಣ) ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮಂಜೂರು ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
1ನೇ ತರಗತಿಯಿಂದ 10ನೇ ತರಗತಿಯವರೆಗೆ ಮೆಟ್ರಿಕ್ ಪೂರ್ವ (Pre Matric Scholarship) ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಆನ್‍ಲೈನ್ ಮೂಲಕ www.scholarships.gov.in ನಲ್ಲಿ ಸಲ್ಲಿಸುವುದು. ವಿದ್ಯಾರ್ಥಿಯ ಪಾಲಕರ ವಾರ್ಷಿಕ ಆದಾಯ ರೂ1 ಲಕ್ಷ ಒಳಗಿರಬೇಕು. ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನವಾಗಿರುತ್ತದೆ.

ಅರ್ಜಿಯ ಜೊತೆಯಲ್ಲಿ ಅಂಕಪಟ್ಟಿ (ಹಿಂದಿನ ಸಾಲಿನ ವಾರ್ಷಿಕ ಅಂಕಪಟ್ಟಿ), ಪ್ರಸಕ್ತ ಸಾಲಿನ ಶುಲ್ಕ ಪಾವತಿಯ ರಶೀದಿ ಪ್ರತಿ, ಸಂಬಂಧ ಪಟ್ಟ ತಹಸೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸ್ವಯಂ ಘೋಷಿತ ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ (ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿ ಜಾತಿ ನಮೂದಾಗದೇ ಇದ್ದಲ್ಲಿ) ಇಲಾಖೆಯ ಅಧಿಕೃತ ವೆಬ್‍ಸೈಟ್ http://gokdom.kar.nic.in ನಲ್ಲಿ ಪಡೆಯಬಹುದು.
ಆಧಾರ್ ಕಾರ್ಡ್ ಪ್ರತಿ, ವಿದ್ಯಾರ್ಥಿಯ ಬ್ಯಾಂಕ್ ಪಾಸ್‍ಪುಸ್ತಕದ ಪ್ರತಿ (ಐ.ಎಫ್.ಎಸ್.ಸಿ ಕೋಡ್‍ನೊಂದಿಗೆ), ವಿದ್ಯಾರ್ಥಿಯ ಪಾಸ್ ಪೋರ್ಟ್ ಸೈಜಿನ 2 ಭಾವಚಿತ್ರ ಲಗತ್ತಿಸಿರಬೇಕು.
ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಪ್ರಿಂಟ್ ಪ್ರತಿಯನ್ನು ನಮೂದಿಸಿದ ಎಲ್ಲಾ ದಾಖಲೆಯೊಂದಿಗೆ ಸಂಬಂಧಿಸಿದ ಶಾಲೆಯ ಮುಖ್ಯೋಪಾಧ್ಯಾಯರಿಗೆ ಸಲ್ಲಿಸುವುದು.
ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.gokdom.kar.nic.in ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ/ ಮಾಹಿತಿ ಕೇಂದ್ರ, ಮೌಲಾನ ಆಜಾದ್ ಭವನ, ಶ್ರೀ ವಿದ್ಯಾಗಣಪತಿ ದೇವಸ್ಥಾನದ ಅಡ್ಡ ರಸ್ತೆ, ಆಕಾಶವಾಣಿ ಹಿಂಭಾಗ, ಸಾಲಗಾಮೆ ಮುಖ್ಯ ರಸ್ತೆ, ಹಾಸನ ಇವರನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.