ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ.
ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ.
ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ.
ನಾನೀಗ ಸಧ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ.
ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ.
Home State News ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ. ತಮ್ಮ ಫೇಸ್ಬುಕ್ ಖಾತೆ ಮೂಲಕ...