ಕೋವಿಡ್ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ ಅಂತ್ಯದವರೆಗೆ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಶಾಲೆ/ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿ ನೀಡದಿರಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.
ಕೋವಿಡ್-2019 ಹಿನ್ನಲೆಯಲ್ಲಿ ರಾಜ್ಯ ಸರ್ಕಾರಿ/ಅನುದಾನಿತ/ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ಮಾರ್ಗಸೂಚಿ ದಿನಾಂಕ:29.08.2020 ರಲ್ಲಿ ಮಾರ್ಗಸೂಚಿಯಂತೆ ಕಂಟೈನ್‌ಮೆಂಟ್ ಜೋನ್ ಹೊರತುಪಡಿಸಿ 9ನೇ ತರಗತಿಯಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಶಾಲೆಯನ್ನು ದಿನಾಂಕ:21.09.2020 ರಿಂದ ತೆರೆದು ವಿದ್ಯಾರ್ಥಿಗಳು ಸಂದೇಹ ಪರಿಹಾರಕ್ಕಾಗಿ ಶಾಲೆಗಳಿಗೆ ಭೇಟಿ ನೀಡಬಹುದೆಂದು ಅನುಮತಿ ನೀಡಲಾಗಿದೆ.
ಈ ಸಂಬಂಧ ವಿವರವಾಗಿ ಪರಿಶೀಲಿಸಿದ ನಂತರ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಕೋವಿಡ್-19 ಹಬ್ಬುತ್ತಿರುವ ಪ್ರಮಾಣ ಕಡಿಮೆಯಾಗುವ ಕಾರಣ, ಈಗಿನ ಪರಿಸ್ಥಿತಿಯಲ್ಲಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುವುದು ಕ್ಷೇಮಕರವಲ್ಲ ಎಂದು ಅಭಿಪ್ರಾಯ ಪಡಿಸಲಾಗಿದೆ.
ಆದ ಕಾರಣ, ಸೆಪ್ಟೆಂಬರ್-2020 ಅಂತ್ಯದವರೆಗೆ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳನ್ನು ಶಾಲೆ/ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಲು, ಅನುಮತಿ ನೀಡದಿರಲು ತೀರ್ಮಾನಿಸಲಾಗಿದೆ. ಪರಿಸ್ಥಿತಿಯ ಅವಲೋಕನ ನಂತರ ಮುಂದಿನ ತೀರ್ಮಾನವನ್ನು ತಿಳಿಸಲಾಗುವುದು.