State News

ಕೋವಿಡ್ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ ಅಂತ್ಯದವರೆಗೆ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಭೇಟಿ ನೀಡಲು ಅನುಮತಿ‌

By Hassana News

September 21, 2020

ಕೋವಿಡ್ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ ಅಂತ್ಯದವರೆಗೆ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಶಾಲೆ/ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿ‌ ನೀಡದಿರಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಕೋವಿಡ್-2019 ಹಿನ್ನಲೆಯಲ್ಲಿ ರಾಜ್ಯ ಸರ್ಕಾರಿ/ಅನುದಾನಿತ/ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ಮಾರ್ಗಸೂಚಿ ದಿನಾಂಕ:29.08.2020 ರಲ್ಲಿ ಮಾರ್ಗಸೂಚಿಯಂತೆ ಕಂಟೈನ್‌ಮೆಂಟ್ ಜೋನ್ ಹೊರತುಪಡಿಸಿ 9ನೇ ತರಗತಿಯಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಶಾಲೆಯನ್ನು ದಿನಾಂಕ:21.09.2020 ರಿಂದ ತೆರೆದು ವಿದ್ಯಾರ್ಥಿಗಳು ಸಂದೇಹ ಪರಿಹಾರಕ್ಕಾಗಿ ಶಾಲೆಗಳಿಗೆ ಭೇಟಿ ನೀಡಬಹುದೆಂದು ಅನುಮತಿ ನೀಡಲಾಗಿದೆ.ಈ ಸಂಬಂಧ ವಿವರವಾಗಿ ಪರಿಶೀಲಿಸಿದ ನಂತರ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಕೋವಿಡ್-19 ಹಬ್ಬುತ್ತಿರುವ ಪ್ರಮಾಣ ಕಡಿಮೆಯಾಗುವ ಕಾರಣ, ಈಗಿನ ಪರಿಸ್ಥಿತಿಯಲ್ಲಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುವುದು ಕ್ಷೇಮಕರವಲ್ಲ ಎಂದು ಅಭಿಪ್ರಾಯ ಪಡಿಸಲಾಗಿದೆ.ಆದ ಕಾರಣ, ಸೆಪ್ಟೆಂಬರ್-2020 ಅಂತ್ಯದವರೆಗೆ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳನ್ನು ಶಾಲೆ/ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಲು, ಅನುಮತಿ ನೀಡದಿರಲು ತೀರ್ಮಾನಿಸಲಾಗಿದೆ. ಪರಿಸ್ಥಿತಿಯ ಅವಲೋಕನ ನಂತರ ಮುಂದಿನ ತೀರ್ಮಾನವನ್ನು ತಿಳಿಸಲಾಗುವುದು.