ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಬಿ.ಎಂ.ರಸ್ತೆ, ಹಾಸನ.ಇವರ ವತಿಯಿಂದ SDA/FDA ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ.

0

ಕರ್ನಾಟಕ ಸರ್ಕಾರದ ವತಿಯಿಂದ ನೇಮಕ ಮಾಡುವ SDA ಮತ್ತು FDA ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಹುದ್ದೆಗಳಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗಾಗಿ ಪರೀಕ್ಷಾ ಪೂರ್ವಭಾವಿ ತರಬೇತಿ ಶಿಬಿರವನ್ನು ಉಚಿತವಾಗಿ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಸ್ಟಡಿ ಸರ್ಕಲ್ ಕಾರ್ಯಕ್ರಮದ ಯೋಜನೆಯಡಿ ಹಮ್ಮಿಕೊಳ್ಳಲಾಗಿದೆ.

ಪರೀಕ್ಷಾ ಪೂರ್ವ ತರಬೇತಿ ಶಿಬಿರದಲ್ಲಿ ಅನುಭವಿ ನುರಿತ ಉಪನ್ಯಾಸಕರಿಂದ ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಲಾಗುತ್ತದೆ. ಈ ತರಬೇತಿ ಶಿಬಿರದ ಸದುಪಯೋಗವನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಹಾಸನದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಹಾಜರಾಗಿ ಆಗಸ್ಟ್ 02 ರಿಂದ ಆಗಸ್ಟ್ 31 ರವರೆಗೂ ಪ್ರತಿದಿನ ಮಧ್ಯಾಹ್ನ 03 ಗಂಟೆಯಿಂದ ಸಂಜೆ 05 ಗಂಟೆಯ ವರೆಗೆ ತರಗತಿಗಳಿಗೆ ಹಾಜರಾಗಲು ಈ ಮೂಲಕ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಹಾಸನ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9482120663, 8660141863, 9900849750,ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಲು ಈ ಮೂಲಕ ಕೋರಿದೆ, ನೋಂದಣಿ ಹಾಗೂ ತರಬೇತಿ ಸಂಪೂರ್ಣ ಉಚಿತವಾಗಿರುತ್ತದೆ.


ಉಚಿತ ತರಬೇತಿ ತರಗತಿಗಳು ನಡೆಯುವ ಸ್ಥಳ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸರ್ಕಾರಿ ಐ.ಟಿ.ಐ ಕಾಲೇಜು ಆವರಣ, ರೈಲ್ವೇ ನಿಲ್ದಾಣದ ಹತ್ತಿರ, ಬಿ.ಎಂ. ರಸ್ತೆ, ಹಾಸನ.

LEAVE A REPLY

Please enter your comment!
Please enter your name here