ಹಾಸನ ಸೆ. : ರಾಷ್ಟ್ರೀಯ ಹೆದ್ದಾರಿ 75 (48) ರ ಬೆಂಗಳೂರು-ಮಂಗಳೂರು ರಸ್ತೆಯ ಮಾರನಹಳ್ಳಿಯಿಂದ ದೊಣಿಗಾಲ್ ವರಗಿನ ಹಾಸನ ಜಿಲ್ಲಾ ವ್ಯಾಪ್ತಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಸೆ. 28 ರಿಂದ ಜಾರಿಗೆ ಬರುವಂತೆ ಎಲ್ಲಾ ಬಗೆಯ ಲಘು ಹಾಗೂ ಬಾರಿ) ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆರ್. ಗಿರೀಶ್ ಅವರು ಆದೇಶಿಸಿದ್ದಾರೆ.
ಈ ರಸ್ತೆಯಲ್ಲಿ ಪೊಲೀಸ್ ಇಲಾಖಾ ವತಿಯಿಂದ ಸಿಬ್ಬಂದಿಯವರನ್ನು ನೇಮಕಗೊಳಿಸಲು ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ತಿಳಿಸಲಾಗಿದ್ದು, ಈ ಬಗ್ಗೆ ಕಾರ್ಯಪಾಲಕ ಇಂಜಿನಿಯರ್ ಮತ್ತು ಹೆದ್ದಾರಿ ಆಡಳಿತ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಸಕಲೆಶಪುರ ರಾಷ್ಟ್ರೀಯ ಹೆದ್ದಾರಿಯವರು ವಾಹನಗಳ ಸಂಚಾರಕ್ಕೆ ಅವಶ್ಯವಿರುವ ಸೂಚನ ಫಲಕ ಅಳವಡಿಸಲು ಮತ್ತು ಸಾರ್ವಜನಿಕರ ಮಾಹಿತಿಗಾಗಿ ವ್ಯಾಪಕ ಪ್ರಚಾರ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್, ಮತ್ತು ಪಿ.ಐ.ಯುನ ಯೋಜನಾ ನಿರ್ದೇಶಕರನ್ನು ರಸ್ತೆ ಸಂಚಾರದ ತಾಂತ್ರಿಕ ವ್ಯವಸ್ಥೆಯ ಜವಾಬ್ದಾರಿ ಅಧಿಕಾರಿಗಳನ್ನಾಗಿ ನೇಮಿಸಲು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.
#shiradighat #sakleshpur #bmroad