ಶಿರಡಿ ರಸ್ತೆ ಕಾಮಗಾರಿ : ಸಕಲೇಶಪುರ – ಮಾರನಹಳ್ಳಿ ರಸ್ತೆ ಬಂದ್ ಇಲ್ಲ ಜಿಲ್ಲಾಧಿಕಾರಿ*

0

ಹಾಸನ : ರಾಷ್ಟ್ರೀಯ ಹೆದ್ದಾರಿ 75ರ ಶಿರಡಿ ಘಾಟ್ ಮಾರ್ಗದ ಕಾಮಗಾರಿ ನಡೆಸಲು ರಸ್ತೆ ಬಂದ್ ಮಾಡುವ ವಿಚಾರ ಸದ್ಯಕ್ಕೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾದ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು ಮಂಗಳೂರು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಳೆಗಾಲ ಇರುವುದ ರಿಂದ ಸದ್ಯದ ಪರಿಸ್ಥಿತಿಯಲ್ಲಿ ರಸ್ತೆ ಬಂದು ಮಾಡದಂತೆ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಓಡಾಟಕ್ಕೆ ತೊಂದರೆ ಆಗದಂತೆ ರಸ್ತೆಯನ್ನು ಕಾಲಕಾಲಕ್ಕೆ ಗುಂಡಿ ಗಳನ್ನು ಮುಚ್ಚುವಂತೆ ಸಂಬಂಧ ಪಟ್ಟ ಗುತ್ತಿಗೆದಾರರಿಗೆ ಈಗಾಗ ಲೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಹಾಸನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಮಾರ್ಗದ ಕಾಮಗಾರಿ ನಡೆಸಲು ಮಾಡುವ ಚಿಂತನೆ ಸದ್ಯಕ್ಕಿಲ್ಲ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿ ವಿಳಂಬ ಕುರಿತು ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಮಂಗಳೂರು ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಲಾಗಿದೆ ಎಂದರು.

ಮಳೆಗಾಲ ಪ್ರಾರಂಭಗೊಂಡಿರುವ ಹೇಳಿದರು. ಕಾರಣ ರಸ್ತೆ ಬಂದ್ ಮಾಡದಂತೆ ನಿರ್ಧಾರ ಕೈಗೊಳ್ಳಲಾಗಿದೆ. ಹೆದ್ದಾರಿ ಯಲ್ಲಿ ಸಂಚರಿಸುವ ವಾಹನ ಸಂಚಾರಕ್ಕೆ ಯೋಗ್ಯವಾದ ರಸ್ತೆಯನ್ನು ಕಾಲಕಾಲಕ್ಕೆ ನಿರ್ವಹಿಸುವಂತೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಸಕಲೇಶಪುರದಿಂದ ಮಾರನಹಳ್ಳಿ ವರೆಗಿನ ಹತ್ತು ಕಿ.ಮೀ. ರಸ್ತೆ ಸುಗಮ ಸಂಚಾರಕ್ಕೆ ಅಗತ್ಯ ಕಾಮಗಾರಿ ನಿರ್ವಹಿಸುವಂತೆ ತಿಳಿಸಲಾಗಿದೆ ಎಂದರು.

ಮಳೆಗಾಲದ ವೇಳೆ ಹೆದ್ದಾರಿ ಪಕ್ಕದಲ್ಲಿ ಭೂ ಕುಸಿತ ಉಂಟಾಗುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿ ಕಾರದ ಪ್ರಾದೇಶಿಕ ಅಧಿ ಕಾರಿಗಳೊಂದಿಗೆ ತಿಂಗಳ ಹಿ೦ದೆಯೇ ಸಭೆಯಲ್ಲಿ ಚರ್ಚಿಸಿ ಅಗತ್ಯ ಸೂಚನೆ ನೀಡಲಾಗಿದೆ ಎಂದರು

LEAVE A REPLY

Please enter your comment!
Please enter your name here