ಶಿರಾಡಿ ಚತುಷ್ಪಥ ಕಾಮಗಾರಿಯ ಜೊತೆಗೆ , ಸುರಂಗ ಮಾರ್ಗ ನಿರ್ಮಿಸುವ ಪ್ರಸ್ತಾಪವೂ ಇದೆ.

0

ಹಾಸನ/ಮಂಗಳೂರು : ಸಕಲೇಶಪುರದಿಂದ ಮಾರನಹಳ್ಳಿಯವರೆಗೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಹೆದ್ದಾರಿಯನ್ನು ತಕ್ಷಣವೇ ದುರಸ್ತಿ ಪಡಿಸಲಾಗುತ್ತದೆ. ದುರಸ್ತಿ ಕಾಮಗಾರಿಗೆ ₹ 12.20 ಕೋಟಿ ಅಂದಾಜು ವೆಚ್ಚವಾಗಲಿದೆ. ಇದರ ಟೆಂಡರ್‌ಗಳ ಮೌಲ್ಯಮಾಪನ ಮಾಡಲಾಗುತ್ತಿದೆ. ಗುಂಡಿ ಮುಚ್ಚುವ ಕಾಮಗಾರಿಯನ್ನು ಈ ಗುತ್ತಿಗೆದಾರರೇ ನಿರ್ವಹಿಸಲಿದ್ದಾರೆ’ ಎಂದು ಗಡ್ಕರಿ ಅವರು ನಳಿನ್ ಅವರಿಗೆ 2022ರ ಡಿ.20ರಂದು ಬರೆದ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ ,

ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್‌ ಕಟೀಲ್ ಅವರಿಗೆ ಪತ್ರ ಬರೆದಿರುವ ಅವರು, ‘‌ಈ ಚತುಷ್ಪಥ ಕಾಮಗಾರಿಯ ಜೊತೆಗೆ, ಮಂಗಳೂರು- ಬೆಂಗಳೂರು ನಡುವಿನ ಸಂಚಾರಕ್ಕೆ ತಗಲುವ ಪ್ರಯಾಣ ವೆಚ್ಚವನ್ನು ಕಡಿತಗೊಳಿಸುವ ಸಲುವಾಗಿ ಶಿರಾಡಿ ಘಾಟಿಯಲ್ಲಿ 23 ಕಿ.ಮೀ. ಉದ್ದದ ಸುರಂಗ ಮಾರ್ಗ ನಿರ್ಮಿಸುವ ಪ್ರಸ್ತಾಪವೂ ಇದೆ. ₹15 ಸಾವಿರ ಕೋಟಿ ವೆಚ್ಚದ ಈ ಕಾಮಗಾರಿಗೆ 2023ರ ಏಪ್ರಿಲ್ ಒಳಗೆ ಸಮಗ್ರ ಯೋಜನಾ ವರದಿಯನ್ನು (ಡಿಪಿಆರ್) ಅಂತಿಮಗೊಳಿಸಿ, ಮೇ, ತಿಂಗಳಿನಲ್ಲೇ ಟೆಂಡರ್‌ ಆಹ್ವಾನಿಸಲಾಗುತ್ತದೆ’ ಎಂದು ಮಾಹಿತಿ ನೀಡಿದ್ದಾರೆ ,

ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ರಾಷ್ಟ್ರೀಯ ಹೆದ್ದಾರಿ 75 ಅನ್ನು ಚತುಷ್ಪಥವನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ₹ 1,976 ಕೋಟಿ ಟೆಂಡರ್‌ ಆಹ್ವಾನಿಸಲಾಗಿದೆ’ ಎಂದು

ಕೇಂದ್ರ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ , ಈ ಎಲ್ಲ ಕಾಮಗಾರಿಗಳಿಂದ ಬೆಂಗಳೂರು-ಮಂಗಳೂರು ರಸ್ತೆ ಸಂಚಾರ ಆರಾಮದಾಯಕವಾಗಲಿದೆ ಎಂದು ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ಸಂಚಾರದ ಅವಧಿ

ಕಡಿಮೆಯಾಗಿ, ಪ್ರಯಾಣ ಸುಗಮವಾಗಲಿದೆ. ಇದಕ್ಕೆ ಅನುವು ಮಾಡಿಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್‌ ಗಡ್ಕರಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಇದು ಬಿಜೆಪಿ ಸರ್ಕಾರದ ಮಹತ್ವದ ಕೊಡುಗೆ ಅಂತ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here