ನವದೆಹಲಿ/ಹಾಸನ/ಮಂಗಳೂರು : ಲೋಕಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಪ್ರಶ್ನೆಗೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಶಿರಾಡಿಘಾಟಿ ಸಂಬಂಧ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದು ಹೀಗೆ :
” ಶಿರಾಡಿ ಘಾಟ್‌ನಲ್ಲಿ ವಾಹನಗಳ ದಟ್ಟಣೆ ಜಾಸ್ತಿ ಇರುವುದು ಗಮನಕ್ಕೆ ಬಂದಿದೆ. ಹೀಗಾಗಿ, ದ್ವಿಪಥವನ್ನು ಚತುಷ್ಪಥವನ್ನಾಗಿ ಪರಿವರ್ತಿಸಲಾಗುತ್ತದೆ. ಇದಕ್ಕೆ ಸಮಗ್ರ ಯೋಜನಾ ವರದಿ ಸಿದ್ಧಪಡಿಸಲು ಸಮಾಲೋಚಕರನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಿಸಿದ್ದು, ವರದಿ ಸಿದ್ಧಪಡಿಸಲಾಗುತ್ತಿದೆ ,
ಮಂಗಳೂರು– ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ. ಜತೆಗೆ, ಅದು ಕಾರ್ಯಸಾಧು ಅಲ್ಲ’ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ