Breaking News

ಬದಲಿ ರಸ್ತೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ 2.2KM ಹೊಸ ರಸ್ತೆ ಮಾಡಲು 4.3 ಕೋಟಿ ರೂ ಮಂಜೂರು

By

July 21, 2022

ಹಾಸನ : ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ಹೆದ್ದಾರಿ ಕುಸಿತದಿಂದ ಸ್ಥಗಿತಗೊಳಿಸಲಾಗಿದ್ದ ಭಾರಿ ವಾಹನ ಸಂಚಾರ ನಿರ್ಬಂಧವನ್ನು ಇಂದಿನಿಂದ ತೆರವುಗೊಳಿಸಲಾಗಿದೆ.

ಹತ್ತು ನಿಮಿಷಗಳ ಅಂತರದಲ್ಲಿ ಏಕಮುಖ ಸಂಚಾರ ಮೂಲಕ ಬಾರಿ ವಾಹನಗಳಿಗೆ ದಾರಿ ಮಾಡಿ ಕೊಡಲಾಗುತ್ತಿದ್ದು, ಹಂತಹಂತವಾಗಿ ಹೆಚ್ಚಿನ ವಾಹನಗಳಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಡಿಸಿ ತಿಳಿಸಿದ್ದಾರೆ.

ದೋಣಿಗಾಲ್ ಬಳಿ ಹೆದ್ದಾರಿ ಕುಸಿತವನ್ನು ಸಂಪೂರ್ಣವಾಗಿ ದುರಸ್ತಿ ಮಾಡಿ, ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಅಲ್ಲದೆ ಬದಲಿ ರಸ್ತೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ 2.2 ಕಿ.ಮೀ. ಹೊಸ ರಸ್ತೆ ಮಾಡಲು ₹4.3 ಕೋಟಿ ಮಂಜೂರು ಮಾಡಲಾಗಿದ್ದು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ಬಳಿಕ ಕಾಮಗಾರಿ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಮತ್ತೆ ಮಳೆ ಪ್ರಮಾಣ ಹೆಚ್ಚಾಗಲಿದ್ದು, ಈ ಹಿನ್ನೆಲೆಯಲ್ಲಿ ದೋಣಿಗಾಲ್ ಹೆದ್ದಾರಿ ಕುಸಿತವನ್ನು ಸಂಪೂರ್ಣವಾಗಿ ದುರಸ್ತಿ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು

ಕಳೆದ ವಾರ ಭಾರೀ ಮಳೆಯಿಂದಾಗಿ ಸಕಲೇಶಪುರ ತಾಲ್ಲೂಕಿನ ದೋಣಿಗಾಲ್‌ನಲ್ಲಿ ಭೂ ಕುಸಿತದಿಂದಾಗಿ ನಿರ್ಬಂಧಿಸಲಾಗಿದ್ದ ವಾಹನ ಸಂಚಾರದಲ್ಲಿ ಸಡಿಲಿಕೆ ಮಾಡಿರುವುದು ಸವಾರರಿಗೆ ನಿಟ್ಟುಸಿರು ಬಿಟ್ಟಂತಾಗಿದೆ.

ಶಿರಾಡಿಘಾಟ್‌ನಲ್ಲಿ ಎಲ್ಲಾ ರೀತಿ ವಾಹನಗಳನ್ನು ನಿರ್ಬ೦ಧಿ ಸಲಾಗಿತ್ತು. ಜಿಲ್ಲಾಧಿಕಾರಿಗಳು ಲಘು ವಾಹನ ಮತ್ತು 6 ಚಕ್ರ ವಾಹನಗಳ ಸಂಚಾರಕ್ಕೆ ಇಂದು ಮಧ್ಯಾಹ್ನದಿಂದ ನೀಡಲಾಗಿರುವ ಹಿನ್ನೆಲೆಯಲ್ಲಿ ವಾಹನಗಳ ಓಡಾಟ ಪ್ರಾರಂಭವಾಗಿದೆ. ಅವಕಾಶ

ಕಳೆದ ಶುಕ್ರವಾರ ದೋಣಿಗಾಲ್‌ನಲ್ಲಿ ಎರಡು ಕಡೆ ಭೂ ಕುಸಿತದಿಂದಾಗಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಇದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಆನಂತರ ಬದಲಿ ಮಾರ್ಗಗಳಲ್ಲಿ ಮಾಡಲಾಗಿತ್ತು. ಸೂಚನೆ ಸ೦ಚರಿಸಲು

ಈಗಾಗಲೇ ಜಿಲ್ಲೆಯಾದ್ಯಂತ ಮಳೆರಾಯ ಸ್ವಲ್ಪ ಬಿಡುವು ನೀಡಿರುವುದರಿಂದ ಕಾಮಗಾರಿಯು ತ್ವರಿತ ಗತಿಯಲ್ಲಿ ನಡೆಯುತ್ತಿದ್ದು, ಸ್ಥಳಕ್ಕೆ ತೆರಳಿ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳೂ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿದ ಬಳಿಕ ಅನುಮತಿಸಿದ್ದಾರೆ.