2023ರ ನವೆಂಬರ್ 2ರಿಂದ ನವೆಂಬರ್ 15ರವರೆಗೆ ಹಾಸನಾಂಬೆಯ ಜಾತ್ರಾ ಮಹೋತ್ಸವ ನಡೆಯಲಿದ್ದು, 14 ದಿನಗಳ ಕಾಲ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ ,
ಮೂರು ತಿಂಗಳ ಕಾಲಾವಕಾಶವಿದೆ. ಅಧಿಕಾರಿಗಳು ಈಗಿನಿಂದಲೇ ಕೆಲಸಗಳಿಗೆ ನಿಯಮಾನುಸಾರ ಟೆಂಡರ್ ಕರೆದು ಕರ್ತವ್ಯ ನಿರ್ವಹಿಸಬೇಕು, ನಗರ ಸಭೆಯಿಂದ ರಸ್ತೆಗಳ ದುರಸ್ತಿ, ಸ್ವಚ್ಛತೆ, ಕುಡಿಯುವ ನೀರು, ವಿದ್ಯುತ್ ದೀಪಾಲಂಕಾರ, ಆಹ್ವಾನ ಪತ್ರಿಕೆಗಳ ಮುದ್ರಣ, ವಿಐಪಿ ಹಾಗೂ ವಿವಿಐಪಿ ಪಾಸ್ ವಿತರಣೆ, ಭಕ್ತಾಧಿಗಳು ವಿಶೇಷ ದರ್ಶನ ಪಡೆಯಲು ಟಿಕೆಟ್ ವ್ಯವಸ್ಥೆ, ಲಾಡು ಪ್ರಸಾದ, ದೊನ್ನೆ ಪ್ರಸಾದ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಿ ಕರ್ತವ್ಯ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಡಿಸಿ ಸೂಚನೆ .,
ಕಳೆದ 2022 ವರ್ಷ ಅಕ್ಟೋಬರ್ 13 ರಿಂದ ಅಕ್ಟೋಬರ್ 27 ರವರೆಗೆ ದೇಗುಲ ಬಾಗಿಲು ತೆರೆದಿದ್ದು, ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ಎಂಟನೇ ದಿನ ಜಿಲ್ಲಾಡಳಿತ ದೇವಿಯ ದರ್ಶನದ ಅವಧಿ ವಿಸ್ತರಣೆ ಮಾಡಲಾಗಿತ್ತು,
ಪ್ರತಿ ದಿನ 30 ರಿಂದ 50 ಸಾವಿರ ಭಕ್ತರಂತೆ ಅಂದಾಜು ಆರು ಲಕ್ಷಕ್ಕೂ ಅಧಿಕ ಭಕ್ತರು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಆಗಮಿಸಿ ಹಾಸನಾಂಬೆಯ ದರ್ಶನ ಪಡೆದದ್ದು ನಾವು ನೆನೆಯಬಹುದು