ಹಾಸನ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರಾದ ಎ.ಬಿ ಮೂರ್ತಿಗೆ ರಾಜ್ಯಪ್ರಶಸ್ತಿ

0

ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕು ರಾಮನಾಥಪುರ ಹೋಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರುದ್ರಪಟ್ಟಣದ ಶಾಲೆಯ ಶಿಕ್ಷಕರಾದ ಶ್ರೀಯುತ ಎ.ಬಿ ಮೂರ್ತಿ ಯವರಿಗೆ 2023-24 ಸಾಲಿನ ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿ ಯನ್ನು ಮುಖ್ಯ ಮಂತ್ರಿ ಸಿದ್ದ ರಾಮ ಯ್ಯನವರು ಹಾಗೂ ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ ನವರು ವಿಧಾನ ಸೌಧ ಬ್ಯಾಕ್ಟೇಟ್ ಹಾಲ್ ನ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಪ್ರಶಸ್ತಿಗೆ ಭಾಜನರಾದ ಶಿಕ್ಷಕರಿಗೆ ಸೆಪ್ಟೆಂಬರ್- 05 ರಂದು ಶಿಕ್ಷಕರ ದಿನಾಚರಣೆ ದಿನದಂದು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಇವರು ತಾಲೂಕಿನ ಆನಂದೂರು ಗ್ರಾಮದ ಬೇಲೂರಯ್ಯ ಪಾರ್ವತಮ್ಮ ನವರ ಮಗನಾದ ಎ.ಬಿ ಮೂರ್ತಿಯವರು ದಿನಾಂಕ-08-05-1976 ರಂದು ಜನಿಸಿದ ಇವರು ಸರ್ಕಾರಿ ಸೇವೆಗೆ ದಿನಾಂಕ-12-11-1999 ರಂದು ಶಿಕ್ಷಕರ ವೃತ್ತಿಗೆ ಸೇರಿದ ನಂತರ ಇವರ ಉತ್ತಮ ಸೇವೆಯನ್ನು ಪರಿಗಣಿಸಿ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ,ನಂತರ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ತಮ್ಮನ್ನು ತೊಡಗಿಕೊಂಡಿದ್ದಾರೆ. ಇವರಿಗೆ ಕರ್ನಾಟಕ ರಾಜ್ಯ ಸರ್ಕಾರ ನೀಡುವ ಶಿಕ್ಷಕರ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇವರಿಗೆ ಈ ಪ್ರಶಸ್ತಿ ಲಭಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಕಾರ್ಯಾಧ್ಯಕ್ಷರು ಹಾಗೂ ನಿಕಟಪೂರ್ವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ.ನಾಯಕರಹಳ್ಳಿ ಮಂಜೇಗೌಡ, ಶಿಕ್ಷಕರ ಸಂಘದ ಮಾಜಿ ಕಾರ್ಯದರ್ಶಿ ಗಳು ಹಾಗೂ ಜಿಲ್ಲಾ ವಚನ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಚೈತ್ರ ನಾಯಕರಹಳ್ಳಿ ,ಕಸಾಪ ಗೌರವ ಕಾರ್ಯದರ್ಶಿ ಕಲ್ಲಹಳ್ಳಿ ಹರೀಶ್ ಮತ್ತು ರಾಜ್ಯ ಶಿಕ್ಷಕರ ಪ್ರಶಸ್ತಿ ಪುರಸ್ಕೃತರಾದ ಕತ್ತಿಮಲ್ಲೇನಹಳ್ಳಿ ಪರಮೇಶ, ಸೋಮ ನಾಯಕ, ಹರಳಹಳ್ಳಿ ರಂಗಸ್ವಾಮಿ ಮುಂತಾದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here