SSLC ವಿದ್ಯಾರ್ಥಿಗಳಿಗೆ ಪರೀಕ್ಷೆಯ ದಿನದಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಿರುವ ಕುರಿತು ಸುತ್ತೋಲೆ
2020-21ನೇ ಸಾಲನ ಕರ್ನಾಟಕದ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಗಳನ್ನು ಸರ್ಕಾರದ ಆದೇಶದಂ ದಿನಾಂಕ 19-07-2021 ಮತ್ತು 22-07-2021 ರಂದು ನಡೆಸಲು ತೀರ್ಮಾನಿಸಿದ್ದು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ಅವಧಿಯಲ್ಲ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಕೋರಲಾಗಿರುತ್ತದೆ.
ಅದರನ್ವಯ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಅಂದರೆ 19-07-2021 ಮತ್ತು 22-07-2021 ರಂದು ಪರೀಕ್ಷೆಗೆ ಹಾಜರಾಗುವ ರಾಜ್ಯದ ಎಲ್ಲಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಸಂಬಂಧ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತ ಪ್ರಯಾಣವನ್ನು ಅನುಮತಿಸಲು ನಿಗಮದ ಎಲ್ಲಾ ಚಾಲಕ / ನಿರ್ವಾಹಕರುಗಳಿಗೆ ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ. ಮುಂದುವರೆದು, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸು ಆಚರಣಿ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ಸನ್ನು ಹತ್ತುವವರಿದ್ದ. ಹಾಗೂ ಆಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದು, ವಿದ್ಯಾರ್ಥಿಗಳು ಬಸ್ಸನ್ನು ಹತ್ತಲು | ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವುದು.
-KSRTC