ಗಮನಿಸಿ ಈ ಬಾರಿಯ ಮೊಹರಂ ಗಣೇಶ ಚತುರ್ಥಿ ಹಬ್ಬಕ್ಕೆ ಇವಿಷ್ಟು ಮಾರ್ಗಸೂಚಿ ಕಡ್ಡಾಯ

0

ಆಗಸ್ಟ್ ರಿಂದ ಅಕ್ಟೋಬರ್ ಮಾಹೆಯಲ್ಲಿ ಆಚರಿಸಲಾಗುವ ಹಬ್ಬಗಳಾದ ಮೊಹರಂ, ಶ್ರೀ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದುರ್ಗಾ ಪೂಜೆ ಮೊದಲಾದ ಹಬ್ಬಗಳನ್ನು ಆಚರಿಸುವಾಗ ಜನದಟ್ಟಣೆ ಮತ್ತು ಒಗ್ಗೂಡುವಿಕೆಗಳನ್ನು ತಡೆಗಟ್ಟಲು ಸ್ಥಳೀಯ ನಿರ್ಬಂಧಗಳನ್ನು ವಿಧಿಸುವಂತೆ ಈ ಕೆಳಕಂಡಂತೆ ಸಲಹೆ ನೀಡಲಾಗಿದೆ

” ಮೊಹರಂ ” ಹಬ್ಬವನ್ನು ಆಚರಿಸುವ ಸಂಬಂಧದ ಮಾರ್ಗಸೂಚಿಗಳು

1) ಸಾರ್ವಜನಿಕ ಸ್ಥಳಗಳಲ್ಲಿ ಆಲಂಗಳನ್ನು/ಪಂಜಾವನ್ನು ಸ್ಥಾಪಿಸುವುದನ್ನು ಹಾಗೂ ತಾಜಿಯಾವನ್ನು ನಿರ್ಬಂಧಿಸಲಾಗಿದೆ. ಮುಂದುವರೆದು, ದಿನಾಂಕ:12.08.2021 ರಿಂದ 20.08.2021 ರವರೆಗೆ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೊಹರಂ ಪ್ರಾರ್ಥನಾ ಸಭೆ ಮತ್ತು ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಮೊಹರಂ ಸಂಬಂಧಿತ ಆಚರಣೆಗಳಲ್ಲಿ ಭಾಗವಹಿಸುವ ಭಕ್ತಾದಿಗಳು ಸೂಕ್ತ ಸಾಮಾಜಿಕ ಅಂತರದೊಂದಿಗೆ ಕನಿಷ ಸಂಖ್ಯೆಯಲ್ಲಿ ಭಾಗವಹಿಸುವುದು.

2) ಪಂಜ, ಆಲಂ ಮತ್ತು ತಾಜಿಯತ್‌ಗಳನ್ನು ಸಾರ್ವಜನಿಕರು ಮುಟ್ಟಿದ ದೂರದಿಂದ ನೋಡತಕ್ಕದ್ದು.

3) ಖಬರಸ್ಮಾನ್‌ ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ ಯಾವುದೇ ತರಹದ ಸಭೆ ಏರ್ಪಡಿಸುವುದನ್ನು ನಿರ್ಬಂಧಿಸಲಾಗಿದೆ. ಖಬರಸ್ಮಾನ್‌ಗಳಿಗೆ ಕೇವಲ ದಫನ್ ಮಾಡಲು ಮಾತ್ರ ಅನುಮತಿ ನೀಡಿದ್ದು, ಮೊಹರಂಗೆ ಸಂಬಂಧಿಸಿದ ಆಚರಣೆಗಳಿಗೆ ಅನುಮತಿ ಇರುವುದಿಲ್ಲ.

4) ಪ್ರಾರ್ಥನಾ ಸ್ಥಳಗಳಲ್ಲಿ ಮುಖ ಗವಸನ್ನು ಕಡ್ಡಾಯವಾಗಿ ಧರಿಸತಕ್ಕದ್ದು,

5) 60 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡತಕ್ಕದ್ದು.

6) ಕೋವಿಡ್-19 ಸಮುಚಿತ ವರ್ತನೆಗಳೊಂದಿಗೆ, ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸತಕ್ಕದ್ದು, ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ, ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸತಕ್ಕದ್ದು,

7) ಕೋವಿಡ್-19 ಸಮುಚಿತ ವರ್ತನೆಯಂತೆ ಮಸೀದಿಗಳಲ್ಲಿ ನಮಾಜ್ ನಿರ್ವಹಿಸುವವರ ಮಧ್ಯ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳತಕ್ಕದ್ದು, ಆಗಾಗ ಕೈಗಳನ್ನು ಸೋಪು ಮತ್ತು ಸ್ಯಾನಿಟೈಸರ್‌ಗಳಿಂದ ಶುಚಿಗೊಳಿಸಿಕೊಳ್ಳತಕ್ಕದ್ದು, ಮಸೀದಿಗಳಲ್ಲಿ ಪುವೇಶಿಸುವ ಮೊದಲು, ದೇಹದ ತಾಪಮಾನವನ್ನು ತಪಾಸಣೆ ಮಾಡತಕ್ಕದ್ದು.

8) ಭಕ್ತಾದಿಗಳು ಪುವೇಶಿಸುವ ದ್ವಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ತಡೆಗಟ್ಟುವುದು. ಆಡಳಿತ ಮಂಡಳಿ/ ಆಡಳಿತಾಧಿಕಾರಿ ಇವರು ಭಕ್ತಾದಿಗಳು ಕುಳಿತುಕೊಳ್ಳುವ ಗರಿಷ್ಮ ಸಂಖ್ಯೆಯನ್ನು ಮುಖ್ಯದ್ವಾರದ ಬಳಿ ಪುದರ್ಶಿಸುವುದು.

9) ಮಸೀದಿಗಳಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ತಮ್ಮ ಮನೆಗಳಿಂದ ಮುಸಲ್ಮಾನನ್ನು (ಜಾಯನಮಾಜ್) ಕಡ್ಡಾಯವಾಗಿ ತರತಕ್ಕದ್ದು, ಪರಸ್ಪರ ಹಸ್ತಲಾಘವ ಮತ್ತು ಆಲಿಂಗನಗಳನ್ನು ಮಾಡತಕ್ಕದ್ದಲ್ಲ. 10) ಮಸೀದಿಗಳನ್ನು ಹೊರತುವಡಿಸಿ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಅಂದರೆ, ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಮತ್ತಿತರ ತೆರೆದ ಜಾಗಗಳಲ್ಲಿ, ಮೊಹರಂ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜಿಸುವಂ

11) ಮೊಹರಂ ಪುಯುಕ್ತ ಯಾವುದೇ ರೀತಿಯ ಮೆರವಣಿಗೆ / ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.

12) ಭಕ್ತಾದಿಗಳು ಯಾವ ಯಾವ ಕೆಲಸವನ್ನು ನಿರ್ವಹಿಸುವುದು/ಯಾವ ಯಾವ ಕೆಲಸವನ್ನು ನಿರ್ವಹಿಸಬಾರದು ಎಂಬ ಬಗ್ಗೆ ಧ್ವನಿ ವರ್ಧಕದ ಮೂಲಕ ಸೂಚಿಸುವುದು.

• ಕೋವಿಡ್ 19 ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ 19 ಸಾಂಕ್ರಾಮಿಕ ಸೋಂಕು ಹೆಚ್ಚಿನ ರೀತಿಯಲ್ಲಿ ಹರಡದಂತೆ ಈ ಸೋಂಕಿನ ಸರಪಳಿಯನ್ನು ಮುರಿಯಲು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಇರುತ್ತದೆ.

ಅಂತೆಯೇ !

” ಗಣೇಶ ”  ಹಬ್ಬವನ್ನು ಆಚರಿಸುವ ಸಂಬಂಧದ ಮಾರ್ಗಸೂಚಿಗಳು

1) ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು, ಇದನ್ನು ಹೊರತುಪಡಿಸಿ ಬೇರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ, ಹೊರಾಂಗಣಗಳಲ್ಲಿ ಚಪ್ಪರ/ವೆಂಡಾಲ್/ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ.

2) ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ / ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.

3) ಪಾರಂಪರಿಕ ಗೌರಿ-ಗಣೇಶ ಮೂರ್ತಿಯನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಅಥವಾ ಮೂರ್ತಿಗಳನ್ನು ಅತಿ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ / ಜಿಲ್ಲಾಡಳಿತ / ಹತ್ತಿರದ ಸ್ಥಳೀಯ ಸಂಸ್ಥೆಗಳ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ, ಕಲ್ಯಾಣಿ ಅಥವಾ ಮೊಬೈಲ್ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸತಕ್ಕದ್ದು.

4) ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡತಕ್ಕದ್ದು, ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಪ್ಯಾನಿಟೈಸರ್ ಹಾಗೂ ಥರ್ಮಲ್ ಪ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸತಕ್ಕದ್ದು.

5) ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ್-19 ಸಮುಚಿತ ವರ್ತನೆಯಂತೆ ಕಡ್ಡಾಯವಾಗಿ ಮುಖಗವಸನ್ನು ಧರಿಸುವುದು, ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು.

6) ಗಣೇಶೋತ್ಸವ ಆಚರಣೆ ಕಾಲಕ್ಕೆ, ಸಂದರ್ಭಕ್ಕನುಗುಣವಾಗಿ ಸರ್ಕಾರ ಜಿಲ್ಲಾಡಳಿತ, ಪೊಲೀಸ್, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ / ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು

ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು, ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾದ ಸೂಚನೆಗಳು/ಮಾರ್ಗಸೂಚಿಗಳು ಪ್ರಮಾಣಿತ ಕಾರ್ಯವಿಧಾನ (SOP)ಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

ದಿನಾಂಕ:06.08.2021 ರಿಂದ ಮಾರ್ಗಸೂಚಿಯಲ್ಲಿ ಮನೋರಂಜನೆ/ಸಾಂಸ್ಕೃತಿಕ/ಧಾರ್ಮಿಕ ಕಾರ್ಯಕ್ರಮಗಳು/ ಇತರೆ ಒಗ್ಗೂಡುವಿಕೆಗಳನ್ನು ಮತ್ತು ಬೃಹತ್ ಸಭೆ-ಸಮಾರಂಭಗಳನ್ನು ನಿಷೇಧಿಸಲಾಗಿದ್ದು, ಜಾತ್ರೆಗಳು, ದೇವಾಲಯದ ಹಬ್ಬಗಳು, ಮೆರವಣಿಗೆ ಮತ್ತು ಸಭೆ – ಸಮಾರಂಭಗಳಿಗೆ ಅನುಮತಿ ನೀಡಲಾಗಿರುವುದಿಲ್ಲ ಆದರಿಂದ ಮೇಲ್ಕಂಡ ಹಬ್ಬಗಳ ಸಂದರ್ಭದಲ್ಲಿ

ಯಾವುದೇ ವಿಧದ ಮೆರವಣಿಗೆಯನ್ನು, ಜನರ ಒಗ್ಗೂಡುವಿಕೆಯನ್ನು ಮಾಡತಕ್ಕದ್ದಲ್ಲ ಹಬ್ಬ ಹರಿದಿನಗಳು ಸಮಾಜದಲ್ಲಿ ಶಾಂತಿ ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಮೊಹರಂ ಮತ್ತು ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು.

ಸಾಮಾಜಿಕ/ರಾಜಕೀಯ/ಕ್ರೀಡಾ/ಮನೋರಂಜನೆ/ಶೈಕ್ಷಣಿಕ/ಸಾಂಸ್ಕೃತಿಕ | ಧಾರ್ಮಿಕ ಕಾರ್ಯಕ್ರಮ/ ಇತರೆ ಒಗ್ಗೂಡುವಿಕೆಗಳನ್ನು ಮತ್ತು ಬೃಹತ್ ಸಭೆ-ಸಮಾರಂಭಗಳನ್ನು ನಿಷೇಧಿಸಲಾಗಿದೆ.

ಮೇಲೆ ಓದಲಾದ (4)ರ ಆದೇಶದಲ್ಲಿ ಪೂಜಾ ಸ್ಥಳಗಳು ದೇವಸ್ಥಾನಗಳು, ಮಸೀದಿಗಳು, ಚರ್ಚ್ ಗಳು, ಗುರುದ್ವಾರಗಳು ಮತ್ತು ಇತರೆ ಧಾರ್ಮಿಕ ಸ್ಥಳಗಳು ತೆರೆಯಲು ಮತ್ತು ಕೋವಿಡ್ 19 ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಪೂಜಾ ಕಾರ್ಯಗಳನ್ನು ಕೈಗೊಳ್ಳಲು ಅನುಮತಿಸಿದೆ. ಆದರೆ, ಜಾತ್ರೆಗಳು, ದೇವಾಲಯದ ಹಬ್ಬಗಳು, ಮೆರವಣಿಗೆ ಮತ್ತು ಸಭೆ ಸಮಾರಂಭಗಳಿಗೆ ಅನುಮತಿ ಇರುವುದಿಲ್ಲ ಮುಂದುವರೆದು, ಹಬ್ಬದ ದಿನಗಳು ಮತ್ತು ಸಾಮೂಹಿಕ ಸಭೆ-ಸಮಾರಂಭಗಳಿಗೆ ಅಗತ್ಯವಿದ್ದಲ್ಲಿ ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಹಿತದೃಷ್ಟಿಯಿಂದ ಸ್ಥಳೀಯ ನಿರ್ಬಂಧಗಳನ್ನು ವಿಧಿಸುವಂತೆ ಆದೇಶಿಸಲಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಅಧಿನಿಯಮ, 2005ರ ಸೆಕ್ಷನ್ 24(ಎಲ್) ರಡಿಯಲ್ಲಿ ಪುದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರ ನಿರ್ದೇಶನದಂತೆ ಈ ಕೆಳಗೆ ಸಹಿ ಮಾಡಿರುವ ನಾನು, ಮುಂಬರಲಿರುವ ಮೊಹರಂ ಮತ್ತು ಗಣೇಶೋತ್ಸವವನ್ನು ಆಚರಿಸುವ ಸಂಬಂಧವಾಗಿ ಈ ಆದೇಶದ ‘ಅನುಬಂಧ’ದಲ್ಲಿರುವಂತೆ ಮಾರ್ಗಸೂಚಿಗಳನ್ನು ಹೊರಡಿಸಿರುತ್ತೇನೆ.

ಈ ಮಾರ್ಗಸೂಚಿಗಳನ್ನು ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಆಯುಕ್ತರುಗಳು, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಟಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸತಕ್ಕದ್ದು ಮತ್ತು ಸದರಿ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005ರ ಸೆಕ್ಷನ್ 51 ರಿಂದ 60ರನ್ವಯ ಮತ್ತು ಭಾರತ ದಂಡ ಸಂಹಿತೆಯ 188ನೇ ಪ್ರಕರಣದಡಿ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳತಕ್ಕದ್ದು.

– ತುಷಾರ್ ಗಿರಿನಾಥ್ ( ಸರ್ಕಾರಿ ಪ್ರಧಾನ ಕಾರ್ಯದರ್ಶಿ)

P SQUARE MOTORS💚
now opening in Hassan with new models!
Address 👣 : in Ring road,Near Gundegowdana koppal circle, Hassan
• Electric Two Wheeler showroom 🎟
• Gemopai Astrid-Model
Opai Technology Scooter.
40ah -72v battery
70km top speed..
• Premium Quality🏋
• 3yrs Free service🕹
• 3yrs warranty Battery.
• 200km per charge 💪
• 3-4Hrs charging time ✌
• Free Helmet/ Registration🌪
• For more Booking and Test Ride Call Now-63665 72226 lohit/63612 12207-Kiran
supportlocal #gogreen #goelectrical

LEAVE A REPLY

Please enter your comment!
Please enter your name here