ಹಾಸನ ಮಾ.17 (ಹಾಸನ್_ನ್ಯೂಸ್ !,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ಹಾಗೂ ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕ ಹಾಸನದ ವತಿಯಿಂದ ಬಾಲ್ಯ ವಿವಾಹ ನಿಷೇದ ಕಾಯ್ದೆ, ಬಾಲ ಕಾರ್ಮಿಕ ತಡೆ ಕಾಯ್ದೆ, ಪೋಕ್ಸೋ ಕಾಯ್ದೆ, ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ಆಯೋಜಿಸಿದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅವರು ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿ, ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟಲು ಹೆಚ್ಚಿನ ನಿಗಾವಹಿಸಿ ಯಾವುದೇ ಮಕ್ಕಳಿಗೂ ಅನ್ಯಾಯವಾಗದಂತೆ ಕಾಳಜಿವಹಿಸಿ ಕಾರ್ಯನಿರ್ವಹಿಸುವಂತೆ ಹೇಳಿದರು.
ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಿ ವಿದ್ಯಾವಂತರನ್ನಾಗಿಸಬೇಕು ಎಂದ ಅವರು ಬಾಲ್ಯವಿವಾಹ, ಬಾಲಕಾರ್ಮಿಕ, ಪೋಕ್ಸೋ ಕಾಯ್ದೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ ಅವರು ಮಾತನಾಡಿ ಬಾಲ್ಯ ವಿವಾಹ, ಬಾಲ ಕಾರ್ಮಿಕತೆಯನ್ನು ತಡೆಗಟ್ಟುವುದರ ಜೊತೆಗೆ ಎಲ್ಲಾ ಪೋಷಕರಿಗೆ ಇದರ ಬಗ್ಗೆ ಮನವರಿಕೆ ಮಾಡಿಕೊಡುವಂತೆ ತಿಳಿಸಿದರು.
ಶಾಲಾ ಕಾಲೇಜುಗಳಲ್ಲಿ ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ದತಿಗಳ ಬಗ್ಗೆ ಅರಿವನ್ನು ಮೂಡಿಸಿ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಪೊಲೀಸರು ಮಕ್ಕಳ ಬಳಿ ಸೌಜನ್ಯದಿಂದ ವರ್ತಿಸಿ ಅವರಿಗೆ ನ್ಯಾಯ ದೊರಕಿಸಿ ಎಂದು ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್ ನಂದಿನಿ ಅವರು ಮಾತನಾಡಿ ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹಕ್ಕೊಳಗಾದ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಿ ಸಮಾಜದ ಮುಖ್ಯವಾಹಿನಿಗೆ ಕರೆತನ್ನಿ ಎಂದರಲ್ಲದೆ, ಇಂತಹ ಮಕ್ಕಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸಂಬಂದಪಟ್ಟ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಕೋಮಲ ಅವರು ಮಾತನಾಡಿ ಅನ್ಯಾಯಕ್ಕೊಳಗಾದ ಮಕ್ಕಳನ್ನು ತಮ್ಮ ಮಕ್ಕಳಂತೆ ತಿಳಿದು ಅವರಿಗೆ ರಕ್ಷಣೆ ನೀಡಿ ಅನ್ಯಾಯ ಮಾಡಿದವರ ವಿರುದ್ದ ಕಠಿಣ ಕ್ರಮ ಕೈಗೊಂಡು ಶಿಕ್ಷೆಗೆ ಗುರಿಪಡಿಸಿ ಎಂದರು.
ಕಾರ್ಯಕ್ರಮದಲ್ಲಿ ಡಿ.ವೈ.ಎಸ್.ಪಿ ಪುಟ್ಟಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ದಿಲೀಪ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜೆ. ಉಷಾ ಹಾಗೂ ಮತ್ತಿತರರು ಹಾಜರಿದ್ದರು.