ದಂಪತಿ ದಿಢೀರ್ ಸಾವು: ಅಂತ್ಯಕ್ರಿಯೆ ಸಂದರ್ಭದಲ್ಲಿ ಶವ ತಡೆದು ಮರಣೋತ್ತರ ಪರೀಕ್ಷೆ

0

ಅರಕಲಗೂಡು : ಕಲುಷಿತ ಅಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ದಂಪತಿ, ಚಿಕಿತ್ಸೆ ಫಲಕಾರಿ ಯಾಗದೇ ಮೃತಪಟ್ಟಿರುವ ಘಟನೆ ತಾಲೂಕಿನ ಬಿಸಿನಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಉಮಾ(48), ನಂಜುಂಡಪ್ಪ (55) ಮೃತ ದಂಪತಿಗಳಾಗಿದ್ದಾರೆ.

ಕಳೆದ ಆಗಸ್ಟ್ 15 ರಂದು ಮನೆಯಲ್ಲಿ ಊಟ ಮಾಡಿದ ಬಳಿಕ ದಂಪತಿಗಳ ಆರೋಗ್ಯ ಕೆಟ್ಟಿತ್ತು. ನಂತರ ಇಬ್ಬರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಕೆಲ ದಿನಗಳ ನಂತರ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ಸಂದರ್ಭದಲ್ಲಿ ನೆನ್ನೆ ಇಬ್ಬರೂ ದಿಢೀರ್ಸಾ ವಿಗೀಡಾಗಿದ್ದಾರೆಂದು ಸಂಬಂಧಿಕರು ಮಾಹಿತಿ ನೀಡಿದ್ದಾರೆ.

ಪೋಷಕರ ಹಠಾತ್ ಸಾವಿನ ಬಗ್ಗೆ ಪುತ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಂದು ಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದ ವೇಳೆ ಗ್ರಾಮಕ್ಕೆ
ಆಗಮಿಸಿದ ಪೊಲೀಸರು ಅಂತ್ಯಕ್ರಿಯೆಗೆ ತಡೆದರು.

ಈ ವೇಳೆ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.ಕುಟುಂಬ ಸದಸ್ಯರ ಮನವೊಲಿಕೆ ಬಳಿಕ ಎರಡೂ ಮೃತದೇಹಗಳನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ದರು.

ಈ ನಡುವೆ ಅಸಹಜ ಸಾವು ಎಂದು ದೂರು ದಾಖಲಿಸಿಕೊಂಡು ಕೊಣನೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ.

LEAVE A REPLY

Please enter your comment!
Please enter your name here