ಹಾಸನ ಸೆ: ಸರ್ಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲಾ /ಕಾಲೇಜುಗಳಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ ಪಾರ್ಸಿ, ಬೌದ್ಧ , ಸಿಖ್, ಜೈನ್, ಕ್ರಿಶ್ಚಿಯನ್ ಮತ್ತು ಮುಸ್ಲಿಂ (ಹೊಸದು/ನವೀಕರಣ) ವಿದ್ಯಾರ್ಥಿಗಳಿಗೆ 2020-21ನೇ ಸಾಲಿಗೆ “ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ “ http://www.kemmannu.com/index.php?action=headlines&type=20065 ನಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ( 1ರಿಂದ 10ನೇ ತರಗತಿ ) ಅರ್ಜಿ ಸಲ್ಲಿಸಲು ನ.15 ಮತ್ತು ಮೆಟ್ರಿಕ್ ನಂತರದ ಮತ್ತು ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿದೆ.
ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಮತ್ತು ಮಾನದಂಡಗಳನ್ನು ಇಲಾಖಾ ವೆಬ್‍ಸೈಟ್‍ನಲ್ಲಿ ನೀಡಲಾಗಿದ್ದು. ಹಾಸನ ಜಿಲ್ಲೆ ವ್ಯಾಪ್ತಿಗೆ ಬರುವ ಕಾಲೇಜಿನ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿದ ನಂತರ ಹಾರ್ಡ್ ಕಾಪಿಯನ್ನು ಅಗತ್ಯ ದಾಖಲೆಗಳೊಂದಿಗೆ ಒಂದು ಪ್ರತಿಯನ್ನು ಸಂಬಂಧಿಸಿದ ಕಾಲೇಜಿಗೆ ಸಲ್ಲಿಸಿ ಹಾಗೂ ಒಂದು ಪ್ರತಿಯು ವಿದ್ಯಾರ್ಥಿಯು ತಮ್ಮ ಬಳಿ ಇಟ್ಟುಕೊಳ್ಳುವುದು.
ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‍ಸೈಟ್ http://www.kemmannu.com/index.php?action=headlines&type=20065 ಅಥವಾ https://dbcdc.karnataka.gov.in/ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಕಚೇರಿ/ ಮಾಹಿತಿ ಕೇಂದ್ರ, ಮೌಲಾನ ಆಜಾದ್ ಭವನ, ಆಕಾಶವಾಣಿ ಹಿಂಭಾಗ, ಸಾಲಗಾಮೆ ಮುಖ್ಯ ರಸ್ತೆ, ಹಾಸನ-573202 ಇವರನ್ನು ಸಂಪರ್ಕಿಸಬಹುದು ಅಥವಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಲ್ಲೂಕು ಪಂಚಾಯಿತಿ ಕಾರ್ಯಲಯ ಆಲೂರು ತಾಲ್ಲೂಕು. ದೂ. ಸಂ: 8660432889/8749001167.
ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಮಾದರಿ ಶಾಲೆ, ಗಣೇಶ ನಗರ, ಚನ್ನರಾಯಪಟ್ಟಣ ದೂ. ಸಂ::8618953277/9986114372
ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ, ಗಾಂಧಿ ನಗರ, ಹೊಳೆನರಸೀಪುರ, ದೂ. ಸಂ: 8970575587
ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಸಮಾಜ ಕಲ್ಯಾಣ ಇಲಾಖೆ, ಪಂಪ್ ಹೌಸ್ ರಸ್ತೆ , ಬೇಲೂರು. ದೂ: 9611887727
ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಮಾದರಿ ಶಾಲೆ, ಜೂನಿಯರ್ ಕಾಲೇಜು ಮುಂಭಾಗ, ಬಿ.ಎಂ. ರಸ್ತೆ, ಸಕಲೇಶಪುರ, ದೂ: 9731370798
ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ರಾಮನಾಥಪುರ ರಸ್ತೆ, ಅರಕಲಗೂಡು ಟೌನ್ ದೂ : 08173-245210, 9740154327
ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಓಲ್ಡ್ ಮಿಡ್ಲಿ ಸ್ಕೂಲ್, ಬಿ.ಹೆಚ್. ರಸ್ತೆ, ಅರಸೀಕೆರೆ ಟೌನ್. ದೂ: 9980951660/7349353200 ಅಥವಾ ಇಲಾಖೆಯ 24×7 ಸಹಾಯವಾಣಿ ಸಂಖ್ಯೆ 8277799990 ನ್ನು ಸಂಪರ್ಕಿಸಬಹುದಾಗಿದೆ.