ಜನೌಷಧ ಮಳಿಗೆ ತೆರೆಯಲು ಅರ್ಜಿ ಆಹ್ವಾನ
ಹಾಸನ: ಜಿಲ್ಲೆಯ ಎಲ್ಲ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆಗಳಲ್ಲಿ ಜನೌಷಧ ಮಳಿಗೆ ತೆರೆಯಲು ಸರ್ಕಾರೇತರ ಸಂಸ್ಥೆಗಳು, ದತ್ತಿ ಸಂಸ್ಥೆಗಳು, ನಿರುದ್ಯೋಗಿ ಯುವಕರು, ಪದವಿ ಫಾರ್ಮಾಸಿಸ್ಟ್‌ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದಾಖಲಾತಿಯೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಜ.15 ರಂದು ಸಂಜೆ 4 ಗಂಟೆ ಒಳಗಾಗಿ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ 9448346638, 9632044062 ಸಂಪರ್ಕಿಸಬಹುದು