ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಹಾಸನದಲ್ಲಿ

0

ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಹಾಸನ ಸೆ.30  ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ, ಹಾಸನ  ಹೋಟೆಲ್, ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲೀಕರ ಸಂಘ ಹಾಸನ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ – 2021 ರ ಅಂಗವಾಗಿ ವಿಚಾರ ಸಂಕಿರಣವನ್ನು  ಅ.1 ರಂದು ಬೆ.11 ಗಂಟೆಗೆ ಹೋಟೆಲ್ ರಾಮದಲ್ಲಿ ಏರ್ಪಡಿಸಲಾಗಿದೆ.
ಮಾಜಿ ಪ್ರಧಾನ ಮಂತ್ರಿ ಹಾಗೂ

ರಾಜ್ಯಸಭಾ ಸದಸ್ಯರಾದ ಹೆಚ್.ಡಿ ದೇವೇಗೌಡ  ಅವರು  ಗೌರವಾನ್ವಿತ ಉಪಸ್ಥಿತಿವಹಿಸಲಿದ್ದಾರೆ. ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಹಾಗೂ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರಾದ ಆನಂದ್ ಸಿಂಗ್ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿರುವವರು. ಶಾಸಕರಾದ ಪ್ರೀತಮ್ ಜೆ ಗೌಡ ಅವರು ಅಧ್ಯಕ್ಷತೆ ವಹಿಸಲಿರುವವರು.  ಸಂಸದರಾದ ಪ್ರಜ್ವಲ್ ರೇವಣ್ಣ, ಶಾಸಕರಾದ ಹೆಚ್.ಡಿ ರೇವಣ್ಣ, ಹೆಚ್.ಕೆ ಕುಮಾರಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ, ಎ.ಟಿ ರಾಮಸ್ವಾಮಿ, ಕೆ.ಎಸ್ ಲಿಂಗೇಶ್ ಹಾಗೂ

ವಿಧಾನ ಪರಿಷತ್ ಸದಸ್ಯರುಗಳಾದ ಮರಿತಿಬ್ಬೇಗೌಡ, ಕೆ.ಟಿ ಶ್ರೀಕಂಠೇಗೌಡ, ಎಂ.ಎ ಗೋಪಾಲಸ್ವಾಮಿ. ನಗರ ಸಭೆ ಅಧ್ಯಕ್ಷರಾದ ಮೋಹನ್ ಕುಮಾರ್ ಬೆಂಗಳೂರು ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್‍ರಾಜ್ ಸಿಂಗ್, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ಸಿಂಧು ಬಿ. ರೂಪೇಶ್,   ಜಿಲ್ಲಾಧಿಕಾರಿ ಆರ್ ಗಿರೀಶ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀನಿವಾಸ್‍ಗೌಡ, ಜಿಲ್ಲಾ ಪಂಚಾಯಿತಿ  ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಬಿ.ಎ ಪರಮೇಶ್, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಸಂಜಯ್ ಹಾಗೂ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

#hassantourism #karnatatourism #tasteofhassan #hassan #hassannews

LEAVE A REPLY

Please enter your comment!
Please enter your name here