ರಾಜ್ಯಪಾಲರಿಗೆ ಗೌರವ ವಂದನೆ
ಹಾಸನ: ನಗರದ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಮಾರ್ಗ ಮಧ್ಯೆ ಗುರುವಾರ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪೊಲೀಸ್ ಗೌರವ ವಂದನೆ ಸಲ್ಲಿಸಿ ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಂ ಶಂಕರ್, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಎನ್.ನಂದಿನಿ, ತಹಸೀಲ್ದಾರ್ ನಟೇಶ್ ಮತ್ತಿತರರು ಹಾಜರಿದ್ದರು. ಇದೇ ವೇಳೆ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಹೆಚ್.ಡಿ ರೇವಣ್ಣ ಅವರೂ ಕೂಡ ರಾಜ್ಯಪಾಲರಿಗೆ ಹೂಗುಚ್ಛ ನೀಡಿ ಸ್ವಾಗತ ಕೋರಿದರು