
ಹಾಸನ : ನೆಟ್ಟಗೆ ಕರೆಂಟ್ ಕೊಡ್ತಿಲ್ಲ ಎಂದು ಆರೋಪಿಸಿ ಚೆಸ್ಕಾಂ ನೌಕರನೋರ್ವನ ಮೇಲೆ ಯುವಕರು ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿರುವ ಕಡವಿನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ., ಪ್ರದೀಪ್ ಹಾಗೂ ಕೃಷ್ಣಮೂರ್ತಿ ಹಲ್ಲೆಗೊಳಗಾದ ಚೆಸ್ಕಾಂ ಸಿಬ್ಬಂದಿಯಾಗಿರುತ್ತಾರೆ.
ನಿನ್ನೆ ಆ.18 ಶುಕ್ರವಾರ ಸಂಜೆ ಇಬ್ಬರು ನೌಕರರು ಕಡವಿನಹೊಸಹಳ್ಳಿ ಗ್ರಾಮಕ್ಕೆ ವಿದ್ಯುತ್ ಲೈನ್ ದುರಸ್ತಿಗೆ ಬಂದು ತಮ್ಮ ಕೆಲಸ ಮಾಡುತ್ತಿದ್ದರಂತೆ . ಈ ವೇಳೆ ಸ್ಥಳಕ್ಕೆ ಬಂದ ಕೆಲ ಯುವಕರು ಸರಿಯಾಗಿ ಯಾಕ್ ಕರೆಂಟ್ ಕೊಡುತ್ತಿಲ್ಲ ಎಂದು ಲೈನ್‍ಮೆನ್‍ಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಗಳ ತೆಗೆದಿದ್ದಾರಂತೆ. ಬಳಿಕ ಇದು ವಿಕೋಪಕ್ಕೆ ತಿರುಗಿದ್ದು, ದೊಣ್ಣೆಗಳಿಂದೆಲ್ಲ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ . ಹಲ್ಲೆ ನಡೆಸಿದ ಯುವಕರನ್ನು ಗ್ರಾಮದ ಪುನೀತ್ ಹಾಗೂ ರಾಕೇಶ್ ಎಂದು ಗುರುತಿಸಲಾಗಿದ್ದು . ಪ್ರಕರಣ ದಾಖಲಾಗಲಿದೆ.