ರಾಜ್ಯಾದ್ಯಂತ ನಾಳೆಯಿಂದಲೇ ಚಿತ್ರಮಂದಿರಗಳು ಓಪನ್, ಜುಲೈ 26ರಿಂದ ಪದವಿ ಕಾಲೇಜು ತೆರೆಯಲು ಅವಕಾಶ

0

ಸುಮಾರು ಮೂರು ತಿಂಗಳಿನಿಂದ ಬಂದ್ ಆಗಿದ್ದ ಚಿತ್ರಮಂದಿರಗಳನ್ನು(Theatre) ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಶೇಕಡಾ 50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದ್ದು, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಜೊತೆಗೆ ಜುಲೈ 26ರಿಂದ ಪದವಿ ಕಾಲೇಜು ತೆರೆಯಲು ಅವಕಾಶ ನೀಡಲಾಗಿದ್ದು, ಆಫ್ಲೈನ್ ತರಗತಿಗೆ ಹಾಜರಾಗಲು ಲಸಿಕೆ ಪಡೆದಿರಬೇಕು. 1 ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ಮುಖ್ಯಮಂತ್ರಿ ಯಡಿಯೂರಪ್ಪ ಇಂದು (ಜುಲೈ 18) ತಮ್ಮ ನಿವಾಸದಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೊರೊನಾ ಕುರಿತು ಚರ್ಚೆ ನಡೆಸಿದರು. ಈ ಚರ್ಚೆಯಲ್ಲಿ ಶೇ.50ರಷ್ಟು ಚಿತ್ರಮಂದಿರಗಳನ್ನು ತೆರೆಯಲು ನಿರ್ಧಾರ ಕೈಗೊಳ್ಳಲಾಗಿದೆ. ಇನ್ನು ನೈಟ್ ಕರ್ಫ್ಯೂನ ರಾತ್ರಿ 10 ರಿಂದ ಬೆಳಗ್ಗೆ 5 ರ ವರಗೆ ವಿಧಿಸಲು ತೀರ್ಮಾನಿಸಲಾಗಿದೆ. ಇನ್ನು ಈ ಸಭೆಯಲ್ಲಿ ಪಬ್ ಮತ್ತು ಈಜುಕೊಳ ತೆರೆಯಲು ಅನುಮತಿ ನೀಡಿಲ್ಲ.

ಸಿನಿಮಾ ರಿಲೀಸ್ ಸದ್ಯಕ್ಕಿಲ್ಲ

ನಾಳೆಯಿಂದ ಥಿಯೇಟರ್ ತೆರೆಯಲು ಅನುಮತಿ ನೀಡಿದ್ದರೂ, ಸ್ಟಾರ್ ನಟರ ಸಿನಿಮಾ ಸದ್ಯಕ್ಕೆ ರಿಲೀಸ್ ಆಗುವಂತೆ ಕಾಣುತ್ತಿಲ್ಲ. ಸದ್ಯ ಶೇ.50 ಆಕ್ಯೂಪೆನ್ಸಿ ಮಾತ್ರ ಅವಕಾಶ ಇದೆ. ಹೀಗಾಗಿ ಸಿನಿಮಾ ರಿಲೀಸ್ ಆಗೋಕೆ ಇನ್ನೂ ಎರಡು ವಾರ ಸಮಯ ಬೇಕಾಗುತ್ತದೆ. ಸಿದ್ದತೆಗೆ ಸಮಯ ಬೇಕಾಗಿದೆ. ಯಾವ ಸಿನಿಮಾಗಳನ್ನ ರಿಲೀಸ್ ಮಾಡೋದು ಅಂತ ಕಾದು ನೋಡಬೇಕಿದೆ ಎಂದು ಪ್ರದರ್ಶಕರ ವಲಯದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ತಿಳಿಸಿದರು.

LEAVE A REPLY

Please enter your comment!
Please enter your name here