ಹಾಸನ ಜಿಲ್ಲೆಯಲ್ಲಿ ಇಂದು ಕೋವಿಡ್ ಲಸಿಕಾ ಮೇಳ ಅತ್ಯಂತ ಯಶಸ್ವಿಯಾಗಿ ನಡೆಯಿತು, ಒಂದೇ ದಿನ 50 ಸಾವಿರ ಲಸಿಕೆ ನೀಡುವ ಗುರಿಯೊಂದಿಗೆ ಜಿಲ್ಲೆಯಲ್ಲಿ 200 ಕ್ಕೂ ಅಧಿಕ ಕೇಂದ್ರಗಳಲ್ಲಿ ಲಸಿಕೆ ನೀಡಲಾಯಿತು.
ಲಸಿಕಾ ಮೇಳದ ವ್ಯವಸ್ಥೆಗಳ ಹಾಗೂ ಪ್ರಗತಿ ಪರಿಶೀಲಿಸಲು ನಗರದ ಸಂತೆ ಪೇಟೆ ಶಾಲೆಯ ಲಸಿಕಾ ಕೇಂದ್ರ, ಕೆಂಚಟಹಳ್ಳಿ ಲಸಿಕಾ ಕೇಂದ್ರ ಹಾಗೂ ಬೂವನಹಳ್ಳಿ ಲಸಿಕಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಆರ್ .ಗಿರೀಶ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರವಿಕಾಂತ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ತಾಲ್ಲೂಕು ವೈದ್ಯಾಧಿಕಾರಿ ಡಾ|| ವಿಜಯ್ ಅವರು ಭೇಟಿ ನೀಡಿ ಪರಿಶೀಲಿಸಿದರು.