ಹಾಸನ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಐತಿಹಾಸಿಕ ಜಯ ದಾಖಲಿಸಲಿದೆ ಎಂದು ಎಐಸಿಸಿ ವೀಕ್ಷಕ, ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದ ಸದಸ್ಯ ವಿಜಯವಸಂತ್ ಭರವಸೆ ವ್ಯಕ್ತಪಡಿಸಿದರು.ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರವಾಸ ಮಾಡಿ, ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿದ್ದೇನೆ. ಜನರೊಂದಿಗೆ ಮಾತನಾಡಿ ನಾಡಿ ಮಿಡಿತ ಅರ್ಥ ಮಾಡಿಕೊಂಡಿದ್ದೇನೆ. ಈ ಬಾರಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಬೇಕು ಎನ್ನುವ ಭಾವನೆ ಮತದಾರರಲ್ಲಿದೆ ಎಂದು ಗುರುವಾರ ಸುದ್ದಿಗೋಷ್ಟಿಯಲ್ಲಿ ಹೇಳಿದರು., ಕೈ ಸರ್ಕಾಕ ರಚನೆ: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಅವರ ನಿರಂತರ ಪ್ರವಾಸದಿಂದ ಕಾಂಗ್ರೆಸ್ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ಬೇಸತ್ತಿರುವ ಜನರು, ಕಾಂಗ್ರೆಸ್ ಸರ್ಕಾರ ರಚಿಸುವುದನ್ನು ಎದುರು ನೋಡುತ್ತಿದ್ದಾರೆ. ಅವರನ್ನು ಬದಲಿಸಲು ಮೋದಿ ಅವರಿಂದ ಸಾಧ್ಯವಿಲ್ಲ
ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಹಾಸನ ಜಿಲ್ಲೆಯ ಜನರು ಸ್ನೇಹಪರ ವ್ಯಕ್ತಿತ್ವ ಹೊಂದಿದ್ದಾರೆ. ಶ್ರಮಿಕರು ಸೇರಿದಂತೆ ಎಲ್ಲ ವರ್ಗದ ಜನರು ಇಲ್ಲಿದ್ದಾರೆ. ಇಲ್ಲಿ ಜೆಡಿಎಸ್, ಕಾಂಗ್ರೆಸ್ ಗೆ ಪ್ರಮುಖ ಎದುರಾಳಿಯಾಗಿದೆ. ಈ ಬಾರಿ ಜಿಲ್ಲೆಯ ಮತದಾರರು ಬದಲಾವಣೆ ಬಯಸುತ್ತಿದ್ದಾರೆ ಎಂದರು. , ಜಿಲ್ಲೆಯಲ್ಲಿ ಪ್ರವಾಸ ಜತೆಗೆ ಪಕ್ಷದ ವತಿಯಿಂದ ಸಮೀಕ್ಷೆಯನ್ನೂ ಕೈಗೊಳ್ಳಲಾಗಿದೆ. ಈ ಸಂಬಂಧ ಶೀಘ್ರದಲ್ಲಿಯೇ ಹೈಕಮಾಂಡ್ ಗೆ ವರದಿ ಸಲ್ಲಿಸಲಾಗುವುದು. ವರದಿ ಆಧರಿಸಿ ಪಕ್ಷ ಅಭ್ಯರ್ಥಿಗಳು ನಿರ್ಧರಿಸಲಾಗುವುದು ಎಂದರು.ನಾನು ಒಂದು ವಾರ ಕಾಲ ಜಿಲ್ಲೆಯಲ್ಲಿರಲಿದ್ದು, ಪಕ್ಷ ಚುನಾವಣಾ ಪೂರ್ವ ಸಿದ್ಧತೆಯ ಜವಾಬ್ದಾರಿ ನೀಡಿದೆ. ಹಾಸನ ಜಿಲ್ಲೆ ಜೆಡಿಎಸ್ ಭದ್ರಕೋಟೆ ಎಂದು ಬಿಂಬಿತವಾಗಿದೆ. ಆದರೆ
ಇಲ್ಲಿ ಕಾಂಗ್ರೆಸ್ ಗೆ ಉತ್ತಮ ಬೆಂಬಲವಿದೆ. ಜನ,ಸಾಮಾನ್ಯರಲ್ಲಿ ಈ ವಿಶ್ವಾಸ ಮೂಡಿಸುವುದು ನಮ್ಮ ಮುಂದಿರುವ ಪ್ರಮುಖ ಸವಾಲಾಗಿದೆ ಎಂದು ಹೇಳಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇ.ಎಚ್.ಲಕ್ಷ್ಮಣ್,ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ, ವೀಕ್ಷಕ ತಂಡದ ಸದಸ್ಯರಾದ ಅನಿಲ್ ಕುಮಾರ್, ಚಾರ್ಲ್ಸ್, ರಾಮಸ್ವಾಮಿ ಇದ್ದರು.
ಈ ಮಾಸಾಂತ್ಯದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದ್ದು, ನಂತರ ಟಿಕೆಟ್ ದೊರೆಯದ ಆಕಾಂಕ್ಷಿಗಳೂ ಒಗ್ಗೂಡಿ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತಾರೆ. ಎಲ್ಲರೊಂದಿಗೂ ನಾವು ಮಾತನಾಡುತ್ತೇವೆ.– ವಿಜಯ ವಸಂತ್, ಕಾಂಗ್ರೆಸ್ ಸಂಸದ