ಹಾಸನ / ಬೆಂಗಳೂರು : ಅರಬ್ಬಿ ಸಮುದ್ರದ ಪೂರ್ವ ಮಧ್ಯಭಾಗ ಹಾಗೂ ಉತ್ತರ ಅಂಡಮಾನ್ ಭಾಗಗಳಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ದಕ್ಷಿಣ ಒಳನಾಡಿನ ಹಾಸನ ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಅ.12 ಮತ್ತು 13ರಂದು ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ – ಹವಾಮಾನ ಇಲಾಖೆ
ಹಾಸನ , ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೋಮವಾರ ಬಾರಿ ಮಳೆ ಯಾಗಿದೆ.
ಅ.16ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಮುಂದುವರೆಯಲಿದೆ.,
ಗಮನಿಸಿ : ಈ ಕೆಳಕಂಡ ಯೆಲ್ಲೋ ಅಲರ್ಟ್ ಘೋಷಿಸಲಾಗಿರುವ ಜಿಲ್ಲೆಗಳ ಲಿಸ್ಟ್ ಹೀಗಿದೆ : ಹಾಸನ , ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ
ಇಂದು ಹಾಸನದಲ್ಲಿ 26’c ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ ಕನಿಷ್ಟ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದ್ದು ಮಳೆ ಅಪರಾಹ್ನ ಗುಡುಗು ಸಹಿತ ಬೀಳಲಿದೆ
#weatherreporthassan #hassan #hassannews