ಕನ್ನಡ ಚಿತ್ರರಂಗದ 3000 ಕಾರ್ಮಿಕರಿಗೆ ತಲಾ 5000 ರೂಪಾಯಿ ನೆರವು ಘೋಷಿಸಿದ ನಟ ಯಶ್

1

ಕನ್ನಡ ಚಿತ್ರರಂಗ ಕೋವಿಡ್ ನ ಲಾಕ್ಡೌನ್ ಕಾರಣದಿಂದಾಗಿ ಸ್ತಬ್ಧವಾಗಿದ್ದು ಇದರಲ್ಲಿನ ಸಾವಿರಾರು ಕಾರ್ಮಿಕರಿಗೆ ಜೀವನೋಪಾಯಕ್ಕೆ ತುಂಬಾ ತೊಂದರೆಯಾಗಿದೆ.ಈಗ ನಟ ಯಶ್ ಕನ್ನಡ ಚಿತ್ರರಂಗದ ಕಾರ್ಮಿಕರ ನೆರವಿಗೆ ಬಂದಿದ್ದು 3 ಸಾವಿರಕ್ಕೂ ಹೆಚ್ಚು ಕಲಾವಿದರು, ಕಾರ್ಮಿಕರ ಬ್ಯಾಂಕ್ ಖಾತೆಗೆ ತಲಾ 5000 ರೂಪಾಯಿ ಹಾಕಲಾಗುವುದು ಎಂದು ಘೋಷಿಸಿದ್ದಾರೆ.ಈ ಬಗ್ಗೆ ಅವರು ಟ್ವಿಟರ್ನಲ್ಲಿ ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಕಣ್ಣಿಗೆ ಕಾಣದ ವೈರಸ್‌ ಮನುಷ್ಯನ ಬದುಕನ್ನು ಹೆಚ್ಚುಕಮ್ಮಿ ಬುಡಮೇಲು ಮಾಡಿದೆ. ಅದರಲ್ಲೂ ಕಳೆದೊಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈಕಟ್ಟಿ ಕುಳಿತಿದೆ.
ಹೌದು. ಇದು ಬರೀ ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ. ಹಾಗಾಗಿ ಚಿತ್ರರಂಗದ 21 ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 3,000ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ ₹5 ಸಾವಿರವನ್ನು ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ. ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ.ಗೋವಿಂದ್‌ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್‌ ಅವರೊಂದಿಗೆ ಚರ್ಚಿಸಿದ್ದೇನೆ. ನಮ್ಮ ಕಲಾವಿದರು, ತಂತ್ರಜ್ಞರು ಮತ್ತು ಕಾರ್ಮಿಕರ ಅಧಿಕೃತ ಬ್ಯಾಂಕ್‌ ವಿವರ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ’ ಎಂದು ಯಶ್‌ ತಿಳಿಸಿದ್ದಾರೆ.

ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲ ಕಷ್ಟಗಳಿಗೂ ಪರಿಹಾರ ಎಂಬುವುದು ನನ್ನ ಭಾವನೆಯಲ್ಲ. ಬದಲಿಗೆ ಶಕ್ತಿ ಇರುವ ಹೃದಯವಂತರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ನಿಂತು ಸಹಾಯ ಮಾಡಿದರೆ, ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎನ್ನುವುದು ನನ್ನ ಆಶಯ’ ಎಂದು ಪೋಸ್ಟ್ ಮಾಡಿದ್ದಾರೆ.

1 COMMENT

LEAVE A REPLY

Please enter your comment!
Please enter your name here